ವಾಷಿಂಗ್ಟನ್: ಬಾಹ್ಯಾಕಾಶದಲ್ಲಿರುವ ಸುನಿತಾ ವಿಲಿಯಮ್ಸ್ (Sunita Williams) ಭೂಮಿಗೆ ಮರಳುವುದು ಇನ್ನಷ್ಟು ತಡವಾಗಲಿದೆ ಎಂದು ನಾಸಾ (NASA) ಮಾಹಿತಿ ನೀಡಿದೆ.
ಮೂರನೇ ಬಾರಿ ಅಂತರಿಕ್ಷಕ್ಕೆ ತೆರಳಿರುವ ಭಾರತ ಮೂಲದ ಅಮೆರಿಕನ್ ವ್ಯೋಮಗಾಮಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವುದು ತಡವಾಗಲಿದೆ. ಮಾರ್ಚ್ ಅಂತ್ಯಕ್ಕೆ ಭೂಮಿಗೆ ವಾಪಸ್ ಆಗಲಿದ್ದಾರೆ. ಮುಂದಿನ ಮಾರ್ಚ್ವರೆಗೂ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಇರಲಿದ್ದಾರೆ ಎಂದು ನಾಸಾ ತಿಳಿಸಿದೆ.ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ
Advertisement
Advertisement
2024ರ ಜೂನ್ 6ರಂದು ಸುನಿತಾ ಮತ್ತು ವಿಲ್ಮೋರ್ ಎಂಟು ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಬಾಹ್ಯಾಕಾಶ ನೌಕೆಯ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಹಿಂದಿರುಗಲು ಸಾಧ್ಯವಾಗಿರಲಿಲ್ಲ. ಈ ಮುಂಚೆ 2025ರ ಫೆಬ್ರವರಿ ತಿಂಗಳಲ್ಲಿ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ತಿಳಿಸಿತ್ತು. ಆದರೆ ಇದೀಗ ಮಾರ್ಚ್‌ಗೆ ಮುಂದೂಡಿಕೆ ಆಗಿದೆ.
Advertisement
ಸುನಿತಾ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ಯಾಕೆ?
ನಾಸಾದ ಸಹಭಾಗಿತ್ವದಲ್ಲಿ ಬೋಯಿಂಗ್ ರೂಪಿಸಿದ್ದ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಪರೀಕ್ಷಾರ್ಥ ಪ್ರಯಾಣದ ಭಾಗವಾಗಿ ಉಪಗ್ರಹ ಉಡಾವಣೆ ಮಾಡಲಾಗಿತ್ತು. ಸುನಿತಾ ಮತ್ತು ಬುಚ್ ಇಬ್ಬರೂ ಗಗನಯಾತ್ರಿಗಳು ಜೂ.5 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ದರು. ಎಂಟು ದಿನಗಳ ಕಾಲ ಅಲ್ಲಿದ್ದು ಜೂ.14 ರಂದು ಸ್ಟಾರ್‌ಲೈನರ್ ಮೂಲಕವೇ ಭೂಮಿಗೆ ವಾಪಸ್ ಆಗಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಅವರು ಬಾಹ್ಯಾಕಾಶದಲ್ಲೇ ಉಳಿಯುವಂತಾಗಿದೆ.ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ: ಡಿ.20, 21 ಕ್ಕೆ ಮಂಡ್ಯ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ