ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ (Sunita Williams) ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ನಾಸಾ (NASA) ಮತ್ತು ಸ್ಪೇಸ್ ಎಕ್ಸ್ (SpaceX ) ಸಿದ್ಧತೆ ನಡೆಸಿದೆ.
ಅಮೆರಿಕದ ಫ್ಲೋರಿಡಾದ ಕೇಪ್ ಕೆನವೆರಲ್ ಬಾಹ್ಯಾಕಾಶ ನಿಲ್ದಾಣದಿಂದ ಸ್ಪೇಸ್ ಎಕ್ಸ್ ಕ್ರ್ಯೂ-9 ಮಿಷನ್ ಪ್ರಾರಂಭಿಸಲು ಸಿದ್ಧವಾಗಿವೆ. ಭಾರತೀಯ ಕಾಲಮಾನ ರಾತ್ರಿ 10:47ಕ್ಕೆ ಉಡಾವಣೆಗೆ ಸಮಯ ನಿಗದಿ ಮಾಡಲಾಗಿದೆ. ಇದನ್ನೂ ಓದಿ: ಮ್ಯಾಪ್ ತೋರಿಸಿ ಭಾರತ ವರ, ಇರಾನ್ ಶಾಪ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು
Advertisement
LIVE: Our @SpaceX #Crew9 mission launches to the @Space_Station. Liftoff from Cape Canaveral Space Force Station is scheduled for 1:17pm ET (1717 UTC). Questions? Use #AskNASA https://t.co/ShUyD36syY
— NASA (@NASA) September 28, 2024
Advertisement
ಈ ಮೊದಲು ಸೆ.26 ರಂದು ಉಡಾವಣೆಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಹೆಲೆನ್ ಚಂಡಮಾರುತದಿಂದ ಉಂಟಾದ ಪ್ರತಿಕೂಲ ಹವಾಮಾನದ ಕಾರಣ ಉಡಾವಣೆಯನ್ನು ಮುಂದೂಡಲಾಗಿತ್ತು. ಇದನ್ನೂ ಓದಿ: ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಸಿಎಂ ಡಿಕೆಶಿ
Advertisement
ಜೂನ್ ತಿಂಗಳಲ್ಲಿ 8 ದಿನಗಳ ಬಾಹ್ಯಾಕಾಶ ಯಾತ್ರೆ ತೆರಳಿದ್ದ ಇಬ್ಬರು ಗಗನಯಾತ್ರಿಗಳು ಬೋಯಿಂಗ್ ಸ್ಟಾರ್ ಲೈನರ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಬಾಹ್ಯಾಕಾಶದಲ್ಲೇ ಉಳಿದಿದ್ದಾರೆ.
Advertisement