ವಾಷಿಂಗ್ಟನ್: ಕಳೆದ 9 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ (Sunita Williams) ಮತ್ತು ಬುಜ್ ವಿಲ್ಮೋರ್ (Butch Wilmore) ಅವರು ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:37) ಭೂಮಿಗೆ ತಲುಪಲಿದ್ದಾರೆ ಎಂದು ನಾಸಾ ತಿಳಿಸಿದೆ.
ನಮ್ಮ ಗಗನಯಾನಿಗಳನ್ನು ಯಶಸ್ವಿಯಾಗಿ ಕರೆತರುವ ಕೆಲಸ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಆರಂಭವಾಗಿದೆ. ಫ್ಲೋರಿಡಾದ ಕಡಲ ತೀರಕ್ಕೆ ಬರುವ ನಿರೀಕ್ಷೆಯಿದೆ. ನಾಸಾ ಮತ್ತು ಸ್ಪೇಸ್ ಎಕ್ಸ್ (SpaceX) ಜಂಟಿ ಪ್ರಯತ್ನದ ಮೂಲಕ ವಾಪಸ್ ಕರೆ ತರುವ ಕಾರ್ಯಚರಣೆ ಇದಾಗಿದೆ ಎಂದು ನಾಸಾ ತಿಳಿಸಿದೆ. ಇದನ್ನೂ ಓದಿ: 400ಕ್ಕೂ ಹೆಚ್ಚು ಕರಡಿಗಳ ವಾಸಸ್ಥಾನವಾಗಿರುವ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ
ಸುನಿತಾ ವಿಲಿಯಮ್ಸ್ ಮತ್ತು ಬುಜ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರಲು ಸ್ಪೇಸ್‌ಎಕ್ಸ್‌ನಲ್ಲಿ ಫಾಲ್ಕನ್ 9 ರಾಕೆಟ್ ಅನ್ನು ಮಾ. 15ರಂದು ಉಡಾವಣೆ ಮಾಡಲಾಗಿತ್ತು. ಭಾನುವಾರ (ಮಾ. 16)ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸ್ಪೇಸ್‌ಎಕ್ಸ್ ತಲುಪಿದ್ದು, ಸುನಿತಾ ವಿಲಿಯಮ್ಸ್ ಹಾಗೂ ಬುಜ್‌ರನ್ನು ಭೂಮಿಗೆ ವಾಪಾಸ್ ಕರೆತರುವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ವಿದೇಶಕ್ಕೆ ಪ್ರಯಾಣಿಸುವಾಗ ವಿಮಾನದಲ್ಲಿ ಎಷ್ಟು ಚಿನ್ನ, ನಗದು ಕೊಂಡೊಯ್ಯಬಹುದು? ಭಾರತದ ಕಸ್ಟಮ್ಸ್ ನಿಯಮಗಳೇನು?
ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶ ತಲುಪಿದ್ದರು. ಆದರೆ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಹಿಂತಿರುಗಲು ಸಾಧ್ಯವಾಗಿರಲಿಲ್ಲ. ಇವರಿಬ್ಬರೂ ಬಾಹ್ಯಾಕಾಶದಲ್ಲಿ 284 ದಿನಗಳನ್ನು ಕಳೆದಿದ್ದಾರೆ.