ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ

Public TV
1 Min Read
MURUGESH NIRANI

ಬೆಂಗಳೂರು: ದುಷ್ಟರ್ಮಿಯೊಬ್ಬನಿಂದ ಆ್ಯಸಿಡ್ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ವೈಯಕ್ತಿಕವಾಗಿ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ACID ATTACK 6

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ರೂ. ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ನೀಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿ ಮಾಡಿದವರಿಗೆ ಮರಣ ದಂಡನೆ ನೀಡಿ: ಬಾಲಕಿ ಆಕ್ರೋಶ

Young Acid Nagesh 4

ಆ್ಯಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬದವರು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿದ್ದಾರೆ ಎಂಬುದನ್ನು ತಿಳಿದು ತುಂಬಾ ಬೇಸರವಾಯಿತು. ಹೀಗಾಗಿ ವೈದ್ಯಕೀಯ ನೆರವಿಗೆ ವೈಯುಕ್ತಿಕವಾಗಿ ನೆರವು ನೀಡುತ್ತಿದ್ದೇನೆ. ಅತಿ ಶೀಘ್ರದಲ್ಲೇ ಕುಟುಂಬದವರಿಗೆ ಚೆಕ್ ನೀಡಲಾಗುವುದು. ಸರ್ಕಾರದಿಂದಲೂ ನೆರವು ಕೊಡಿಸಲು ಎಲ್ಲಾ ರೀತಿಯಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಸಹಾಯಹಸ್ತ

ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ ಕೃತ್ಯ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದರೆ ಈ ದುಷ್ಕತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಎಷ್ಟು ಸಾಧ್ಯವೋ ಅದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ತಪ್ಪಿತಸ್ಥರು ಯಾರೇ ಇದ್ದರೂ ಸರ್ಕಾರ ಖಂಡಿತವಾಗಿಯೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಿದೆ ಎಂದು ಎಚ್ಚರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *