ಚಿಕ್ಕಬಳ್ಳಾಪುರ: ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಅಂತ ದೃಷ್ಟಿ ದೋಷ ನಿವಾರಣೆಗೆ ಚಿಕ್ಕಬಳ್ಳಾಪುರದ (Chikkaballapura) ರೈತರೊಬ್ಬರು ವಿಭಿನ್ನ ಐಡಿಯಾ ಮಾಡಿದ್ದಾರೆ.
ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ (Rachita Ram) ಹಾಗೂ ಮಾದಕ ನಟಿ ಸನ್ನಿ ಲಿಯೋನ್ *(Sunny Leone) ಬ್ಯಾನರ್ ಕಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಈ ಐಡಿಯಾ ಮಾಡಿದ್ದಾರೆ. ಇದನ್ನೂ ಓದಿ: ರಣಮಳೆಗೆ ಭಾರೀ ಅವಾಂತರ – ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ!
- Advertisement
- Advertisement
ತಾವು 5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದಾರೆ. ಇನ್ನೇನು ಕಾಯಿ ಬಿಡುವ ಸಮಯವಿದೆ. ಹೀಗಾಗಿ ಟೊಮೆಟೊ ಬೆಳೆ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ, ಒಳ್ಳೆಯ ಫಸಲು ಬಂದು ಒಳ್ಳೆ ಲಾಭ ಸಿಗಲಿ ಅನ್ನೋ ಕಾರಣಕ್ಕೆ ದೃಷ್ಟಿ ಬೊಂಬೆ ಬದಲು ನಟಿಯರ ಭಾವಚಿತ್ರದ ಬ್ಯಾನರ್ ಅಳವಡಿಸಿದ್ದಾರೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?
ಸದ್ಯ ಚಿಕ್ಕಬಳ್ಳಾಪುರದಲ್ಲಿ ಟೊಮೆಟೊ ಪ್ರತಿ ಕ್ವಿಂಟಲ್ ಸುಮಾರು 3,500 ರೂ.ಗೆ ಮಾರಾಟವಾಗುತ್ತಿದೆ. ಇದನ್ನೂ ಓದಿ: ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ಪತ್ತೆ; ಶ್ರೀಮಂತರ ಮಕ್ಕಳಲ್ಲಿ ವೈರಸ್ ಕಂಡುಬಂದಿದ್ದು ಹೇಗೆ?