ತುಮಕೂರು: ಎಂಎಲ್‌ಸಿ ರಾಜೇಂದ್ರ (MLC Rajendra) ಹತ್ಯೆಗೆ ಸುಪಾರಿ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಅಲ್ಲದೇ, ಈ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಕೂಡ ಪಡೆಯುತ್ತಿದೆ. 17 ನಿಮಿಷದ ಆಡಿಯೋದಲ್ಲಿ ಸುಪಾರಿ ಬಗ್ಗೆ ಮಾತನಾಡಿರುವ ಆರೋಪಿ ಸೋಮನ ಆಪ್ತೆ ಪುಷ್ಪಾ ಯಾರು? ಹಿನ್ನೆಲೆ ಏನು ಎಂಬುದರ ಚರ್ಚೆ ಕೂಡ ಆಗುತ್ತಿದೆ.
ಪುಷ್ಪಾ ಯಾರು?
ಪುಷ್ಪಾ ಟೀ ಅಂಗಡಿಯನ್ನ ನಡೆಸುತ್ತಿದ್ದು, ರಾಜಕೀಯ ವ್ಯಕ್ತಿಯ ನಗ್ನ ವಿಡಿಯೋಗಳನ್ನು ಇಟ್ಟಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಳು. ಅಲ್ಲದೇ, ಜೈಲುವಾಸ ಅನುಭವಿಸಿ ಹೊರ ಬಂದಿರುವ ಪುಷ್ಪಾ, ರೌಡಿಗಳೊಂದಿಗೆ ನಿಕಟ ಸಂಪರ್ಕದಲ್ಲಿ ಇದ್ದಾಳೆ ಎಂದು ಹೇಳಲಾಗುತ್ತಿದೆ. ಸುಪಾರಿ ಕೇಸ್‌ಗೆ ಸಂಬಂಧಿಸಿದಂತೆ ಪುಷ್ಪಾಳನ್ನು ಕ್ಯಾತಸಂದ್ರ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: Kolar | ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ
ಸಚಿವ ಕೆ.ಎನ್ ರಾಜಣ್ಣ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳಾದ ಸೋಮ ಹಾಗೂ ಗುಂಡಾನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆಯೇ ಸುಪಾರಿಗೆ ಸಂಚು ರೂಪಿಸಿದ್ದ ಸ್ಫೋಟಕ ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಜೈಪುರದ ಸೋಮ ಎಂಬಾತನ ಆಪ್ತೆ ಪುಷ್ಪಾ, ರಾಜೇಂದ್ರ ಆಪ್ತ ರಾಕಿ ಜೊತೆ ನಡೆಸಿದ ಸಂಭಾಷಣೆ ಇದಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಯಾರೆಲ್ಲ ಹೊಸ ಪಕ್ಷ ಕಟ್ಟಿದ್ದರು? ರಚನೆ ಮಾಡಿದ್ದು ಯಾಕೆ? ಕೊನೆಗೆ ಏನಾಯ್ತು?
ಆರೋಪಿ ಸೋಮ ರಾಜೇಂದ್ರರನ್ನ ಹತ್ಯೆ ಮಾಡಲು ಸುಪಾರಿ ಪಡೆದಿರುವುದಾಗಿ ಪುಷ್ಪಾಳ ಬಳಿ ಹೇಳಿಕೊಂಡಿದ್ದಾನೆ. ಆ ಬಳಿಕವೇ ಪುಷ್ಪಾ ಸುಪಾರಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಿದ್ದಳು. ಸೋಮನ ಜೊತೆಗಿದ್ದುಕೊಂಡೇ ಕೊಲೆ ಸಂಚಿನ ಮಾಹಿತಿ ಕಲೆಹಾಕಿದ್ದಳು. ಬಳಿಕ ಈ ವಿಚಾರವನ್ನ ರಾಜೇಂದ್ರ ಅವರಿಗೆ ತಿಳಿಸಲು ಪುಷ್ಪಾ ಮುಂದಾಗಿದ್ದಾಳೆ. ರಾಜೇಂದ್ರ ಅವರಿಗೆ ವಿಷಯ ತಿಳಿಸಲು ರಾಕಿ ಎನ್ನುವ ಹುಡುಗನ್ನ ಬಳಸಿಕೊಂಡಿದ್ದಾಳೆ. ಕೊಲೆ ಸಂಚಿನ ಬಗ್ಗೆ ಪುಷ್ಪ ಹೇಳಿದ್ದನ್ನ ರಾಕಿ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ ರಾಜೇಂದ್ರ ಅವರಿಗೆ ಈ ಆಡಿಯೋವನ್ನ ತಲುಪಸಿಲಾಗಿತ್ತು. ಆಡಿಯೋ ಕೇಳಿದ ಎಂಎಲ್‌ಸಿ ರಾಜೇಂದ್ರ ಕೂಡಲೇ ಅಲರ್ಟ್ ಆಗಿ, ತುಮಕೂರು ಎಸ್ಪಿ ಬಳಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ UPI, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ರೂಲ್ ಚೇಂಜ್
ಕಳೆದ ನವೆಂಬರ್‌ನಲ್ಲಿ ರಾಜೇಂದ್ರ ಅವರ ಮಗಳ ಬರ್ತ್ಡೇ ಡೆಕೋರೇಷನ್‌ಗೆ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರನ್ನೂ ಸೋಮ ಕಳುಹಿಸಿದ್ದ. ಆಗಲೇ ಹತ್ಯೆಗೆ ಯತ್ನ ನಡೆದಿತ್ತು ಎಂದು ಆಡಿಯೋದಲ್ಲಿ ಪುಷ್ಪಾ ಮಾಹಿತಿ ನೀಡಿದ್ದಾಳೆ. ಅಲ್ಲದೇ ಸೋಮನಿಗೆ 5 ಲಕ್ಷ ಹಣ ಬಂದಿರೋದು ಸತ್ಯ ಸತ್ಯ ಸತ್ಯ. ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದರೆ ಎಲ್ಲಾ ಗೊತ್ತಾಗುತ್ತೆ. ರಾಜೇಂದ್ರ ಅವರ ಮುಂದೆ ನಾನೇ ಹೇಳ್ತೀನಿ, ನನ್ನ ಕರೆದುಕೊಂಡು ಹೋಗು ಅಂತ ರಾಕಿ ಎನ್ನುವವನೊಂದಿಗೆ ಪುಷ್ಪಾ ಹೇಳಿಕೊಂಡಿದ್ದಾಳೆ. ಜೊತೆಗೆ ಜೈಪುರದ ಮತ್ತೋರ್ವ ರೌಡಿಶೀಟರ್‌ನನ್ನು ಮರ್ಡರ್ ಮಾಡೋದಾಗಿ ಸೋಮ ಹೇಳಿದ್ದಾನೆ. ಅದಕ್ಕಾಗಿ ಬೆಂಗಳೂರಿನ ಕಲಾಸಿಪಾಳ್ಯದಿಂದ ಇಬ್ಬರು, ತಮಿಳು ಹುಡುಗರನ್ನ ಸೋಮ ಕರೆಸಿಕೊಳ್ತಿದ್ದಾನೆ. ಈ ಬಗ್ಗೆಯೂ ಆಡಿಯೋದಲ್ಲಿ ಪುಷ್ಪಾ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: ಹೊಸ ಹಿಂದೂ ಪಕ್ಷ ಸ್ಥಾಪನೆಯಾಗುತ್ತಾ? ಏನಿದು ಯತ್ನಾಳ್ ಲೆಕ್ಕಾಚಾರ?