ಬಾಕ್ಸ್ ಆಫೀಸಿನಲ್ಲಿ ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿದೆ. ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಝೀ 5ನಲ್ಲಿ ಚಿತ್ರವನ್ನು ವೀಕ್ಷಿಸಬಹುದು.
ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ.
- Advertisement
- Advertisement
ಹನುಮಾನ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ ಮಾತಲ್ಲಿ ಹೇಳದೇ ಪಾರ್ಟ್ 2 ಚಿತ್ರದ ಕೆಲಸಕ್ಕೂ ಅವರು ಮುಂದಾಗಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.
ಪ್ರಶಾಂತ್ ವರ್ಮಾ ಅವರ ಸೂಪರ್ ಹೀರೋ ಚಿತ್ರ ಹನುಮಾನ್ ಜನವರಿ 12 ರಂದು ಬಿಡುಗಡೆಯಾಯಿತು. ತೇಜ ಸಜ್ಜ, ವರಲಕ್ಷ್ಮಿ ಶರತ್‌ಕುಮಾರ್, ಅಮೃತ ಅಯ್ಯರ್ ಮತ್ತು ವಿನಯ್ ರೈ ನಟಿಸಿರುವ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಕ್ಸಸ್ ಬೆನ್ನಲ್ಲೇ ಜೈ ಹನುಮಾನ್ ಸಿನಿಮಾದ ಕೆಲಸ ಶುರುವಾಗಿವೆ.
ಹನುಮಾನ ಸಿನಿಮಾ ಮೂಲಕ ಪ್ರಶಾಂತ್ ವರ್ಮಾ ರಾಷ್ಟ್ರವ್ಯಾಪಿ ಜನಪ್ರಿಯರಾಗಿದ್ದಾರೆ. ಸೃಜನಶೀಲ ನಿರ್ದೇಶಕರು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನಿಂದ ಮತ್ತೊಂದು ಮಹಾಕಾವ್ಯ ಸಾಹಸವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾ ಘೋಷಿಸಿದ್ದು, ದೊಡ್ಡ ಮಟ್ಟದಲ್ಲಿ ಮೂಡಿಬರಲಿರುವ ಸೀಕ್ವೆಲ್‌ಗಾಗಿ ನಿರ್ದೇಶಕರು ಈಗಾಗಲೇ ಸ್ಕ್ರಿಪ್ಟ್ ನ್ನು ಸಿದ್ಧಪಡಿಸಿದ್ದಾರೆ. ಹೈದರಾಬಾದ್‌ನ ಹನುಮಾನ್ ದೇವಾಲಯದಲ್ಲಿಂದು ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಮುಂದಿನ ದಿನಗಳಲ್ಲಿ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದ್ದಾರೆ.