ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು. 1/6
— H D Kumaraswamy (@hd_kumaraswamy) July 25, 2022
Advertisement
ರಾಜ್ಯದ ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂತಹ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ ಜೊತೆ ಚರ್ಚಿಸುವೆ ಎಂದ ಸುಧಾಕರ್
Advertisement
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು. 5/6
— H D Kumaraswamy (@hd_kumaraswamy) July 25, 2022
Advertisement
ಕೋವಿಡ್ ವೇಳೆ ಎಲ್ಲಾ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ಜನಪರ ಉತ್ಸವ ಅಲ್ಲ, ಅಸ್ತಿತ್ವ ತೋರ್ಪಡಿಕೆಯ ಉತ್ಸವ: ಹಾಲಪ್ಪ ಆಚಾರ್
ರಾಜ್ಯದಲ್ಲಿ ಇನ್ನೆಷ್ಟು ಅಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.