Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ

Bengaluru City

ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ

Public TV
Last updated: February 24, 2026 7:00 pm
Public TV
Share
2 Min Read
Ranveer Singh Rishab Shetty Kantara
SHARE

– ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡ: ಹೈಕೋರ್ಟ್
– ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ದೈವಕ್ಕೆ ಅವಮಾನದ ಆರೋಪ ಹೊತ್ತಿರುವ ರಣವೀರ್ ಸಿಂಗ್‌ಗೆ (Ranveer Singh) ಇಂದು ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Highcourt), ರಣವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚನೆ ನೀಡಿದೆ. ಇದೇ ವೇಳೆ ರಣವೀರ್ ಸಿಂಗ್‌ರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ರಣವೀರ್‌ ಸಿಂಗ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಒಂದು ಭಾಗದ ಜನರ ಮತ್ತು ಧಾರ್ಮಿಕ ಭಾವನೆಗೆ ದಕ್ಕೆ ತರುವ ಹಾಗೆ ಮಾತಬಾಡಬಾರದು. ಅದು ರಣವೀರ್ ಸಿಂಗ್ ಅಗಿರಲಿ, ಯಾರೇ ಅಗಿದ್ದು ಸರಿ ಹಾಗೆ ಮಾತನಾಡುವುದು ಸಲ್ಲದು. ಸೂಪರ್ ಸ್ಟಾರ್ ಅಗಿರುವ ರಣವೀರ್ ಸಿಂಗ್ ಗೆ ಸಾಕಷ್ಟು ಜನ ಫಾಲೋ ಮಾಡುವವರು ಇದ್ದಾರೆ. ಹೀಗಾಗಿ ಇದನ್ನ ಹಗುರವಾಗಿ ಪರಿಗಣಿಸಲಾಗುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಗೋವಾದಲ್ಲಿ ಸಿನಿಮಾ ಫೆಸ್ಟಿವಲ್ ವೇಳೆ ಕಾಂತಾರ ಸಿನಿಮಾ ಕುರಿತು ಅಪಹಾಸ್ಯ ಮಾಡಿದ್ದಾರೆ ಎಂಬ ಆರೋಪವಿತ್ತು. ನಟ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ದೈವವನ್ನು ಫೀಮೇಲ್ ಗೋಸ್ಟ್ ಎಂದು ಹೇಳಿಕೆ ನೀಡಿದ್ದ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾ.ನಾಗಪ್ರಸನ್ನ ಪೀಠ ರಣವೀರ್ ಸಿಂಗ್‌ರನ್ನ ತರಾಟಗೆ ತೆಗೆದುಕೊಂಡಿದೆ.

karnataka high court

ರಣವೀರ್ ಸಿಂಗ್ ಪರವಾಗಿ ಸಜನ್ ಪೂವಯ್ಯ ಕೋರ್ಟ್ ಗೆ ಹಾಜರ್ ಆಗಿ ವಾದ ಮಂಡಿಸಿದ್ರು. ರಿಷಬ್ ಶೆಟ್ಟಿ ಅಭಿನಯನದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ಮಾತನಾಡಿದ ಪದಗಳಿಗು ಕೂಡ ಕ್ಷಮೆ ಕೋರಲಾಗಿದೆ. ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿಲ್ಲ. ಅಲ್ಲದೆ ತನಿಖೆಗೆ ಕೂಡ ಸಹಕಾರ ನೀಡುವುದಾಗಿ ಕೋರ್ಟ್‌ಗೆ ಮಾಹಿತಿ ನೀಡಿದ್ರು. ಇದೇ ವೇಳೆ ದೂರುದಾರರ ಪರ ವಕೀಲರು ರಣವೀರ್ ಪತ್ನಿ ದೀಪಿಕಾ ಕೂಡ ಕನ್ನಡದವರು ಆಗಿದ್ದಾರೆ. ಕನ್ನಡ ಬಗ್ಗೆ ತಿಳಿದುಕೊಂಡು ಮಾತನಾಡಬೇಕು ಎಂದು ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್ ಮುಂದಿನ ಆದೇಶದವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸಿದಂತೆ ಆದೇಶ ಮಾಡಿ ಮುಂದಿನ ಸೋಮವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಪೀಠ ಹೇಳಿದ್ದೇನು?
ಸೂಪರ್ ಸ್ಟಾರ್ ಆದರೇನು ಕಾನೂನಿನಿಗಿಂತ ಮೇಲಿಲ್ಲ. ಇಲ್ಲಿ ಎರಡು ವಿಚಾರಗಳಿವೆ. ದೇವತೆಯಾದ ಚಾಮುಂಡಿಯ ಪಾತ್ರವನ್ನು ರಿಷಬ್ ಶೆಟ್ಟಿ ನಿಭಾಯಿಸಿದ್ದಾರೆ. ಜನರ ಧಾರ್ಮಿಕ ಭಾವನೆಗಳ ಬಗ್ಗೆ ರಣವೀರ್‌ಗೆ ಗೊತ್ತಿಲ್ಲದಿರಬಹುದು. ಮಹಿಳಾ ದೆವ್ವ ಎಂದು ಹೇಳಿ ರಿಷಬ್ ಅವರ ನಟನೆಯನ್ನು ಮಿಮಿಕ್ರಿ ಮಾಡಿದ್ದಾರೆ. ಇದು ನಿಜಕ್ಕೂ ಭಾವನೆಗಳಿಗೆ ಘಾಸಿ ಮಾಡಿರುವ ವಿಚಾರ. ಇಷ್ಟು ಹಗುರವಾಗಿ ರಣವೀರ್ ಮಾತನಾಡಬಾರದು. ನೀವು ರಣವೀರ್ ಸಿಂಗ್ ಅಥವಾ ಬೇರಾರೇ ಆದರೂ ಅಷ್ಟು ಹಗುರವಾಗಿ ಮಾತನಾಡಬಾರದು.

ಜನರ ಮೇಲೆ ಪ್ರಭಾವ ಹೊಂದಿರುವ ನಟನಾಗಿ ರಣವೀರ್ ಜವಾಬ್ದಾರಿಯಿಂದ ಇರಬೇಕು. ದೇವರ ಬಗ್ಗೆ ಮಾತನಾಡುವಾಗ ಅವರು ತಿಳಿದುಕೊಂಡು ಮಾತನಾಡಬೇಕಿತ್ತು. ದೈವವನ್ನು ದೆವ್ವ ಎನ್ನಲಾಗದು. ಇನ್ನೊಬ್ಬರ ಭಾವನೆಗೆ ಘಾಸಿ ಮಾಡುವ ಅಧಿಕಾರ ರಣವೀರ್‌ಗೆ ಇಲ್ಲ. ರಣವೀರ್ ಕ್ಷಮೆ ಕೋರಿರಬಹುದು. ಆದರೆ, ಹೇಳಿದ್ದೆಲ್ಲಾ ಹೊರಟು ಹೋಗುತ್ತದೆಯೇ? ಜನರು ಅದನ್ನು ಮರೆತು ಬಿಡಬಹುದು. ಆದರೆ, ಇಂಟೆರ್‌ನೆಟ್ ಮರೆಯುವುದಿಲ್ಲ. ವೇದಿಕೆಗೆ ಹೋಗಿ ಇದೆಲ್ಲವನ್ನೂ ಮಾಡುವಾಗ ಕಲಾವಿದರು ಎಚ್ಚರವಹಿಸಬೇಕು. ಅರಿವಿಲ್ಲದೇ ಏನೇನೋ ಮಾತನಾಡಲಾಗದು. ಇದನ್ನು ಇಷ್ಟು ಲಘುವಾಗಿ ಪರಿಗಣಿಸಲಾಗದು ಎಂದಿತು.

TAGGED:bengalurudaivaKanataraKarnataka HighCourtRanveer Singhಕಾಂತಾರಬೆಂಗಳೂರುರಣವೀರ್ ಸಿಂಗ್ರಿಷಬ್ ಶೆಟ್ಟಿಹೈಕೋರ್ಟ್
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Siddaramaiah 5
Bengaluru City

ಉದ್ಯೋಗ ಭರ್ತಿಯಾಗದ್ಧಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
12 minutes ago
Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
41 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
1 hour ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
2 hours ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
2 hours ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?