ತೆಲುಗಿನ ಸೂಪರ್ ಸ್ಟಾರ್ ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸರಕಾರಿ ಸಕಲ ಗೌರವಗಳೊಂದಿಗೆ ನಡೆಯಲಿದೆ. ಪದ್ಮಾಲಯ ಸ್ಟುಡಿಯೋದಲ್ಲಿ ಅಭಿಮಾನಿಗಳಿಗಾಗಿ ಇಂದು ಮಧ್ಯಾಹ್ನ 12.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಆನಂತರ ಪಾರ್ಥೀವ ಶರೀರವನ್ನು ಮಹಾಪ್ರಸ್ಥಾನಂಗೆ ಶಿಫ್ಟ್ ಮಾಡಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಮಂಗಳವಾರ ಸಂಜೆಯೇ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕಿತ್ತು. ಅದು ಸಾಧ್ಯವಾಗದೇ ಇರುವ ಕಾರಣಕ್ಕಾಗಿ ಇಂದು ಮಧ್ಯಾಹ್ನ 12.30ರವರೆಗೂ ವ್ಯವಸ್ಥೆ ಮಾಡಲಾಗಿದೆ.
Advertisement
ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದು, ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ವೃತ್ತಿ ಜೀವನದ ಸಾಧನೆಯನ್ನು ಕೊಂಡಾಡುತ್ತಲೇ, ಈ ಸಂದರ್ಭದಲ್ಲಿ ದುಃಖದಲ್ಲಿರುವ ಕೃಷ್ಣ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ‘ಕೃಷ್ಣ ಲೆಜೆಂಡರಿ ನಟರಾಗಿದ್ದು, ತಮ್ಮ ನಟನೆ ಮೂಲಕ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿ ಇದ್ದರು’ ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ
Advertisement
Advertisement
ಸಿನಿಮಾ, ನಾಟಕಗಳಲ್ಲಿ ಮಾತ್ರವಲ್ಲ, ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದವರು ಕೃಷ್ಣ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಲೋಕಸಭಾ ಸದಸ್ಯರಾಗಿಯೂ ಜನಪರ ಕೆಲಸಗಳನ್ನೂ ಮಾಡಿದ್ದಾರೆ. ಇವರ ಸೇವೆಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಿಂದ ದೂರವಿದ್ದರೂ, ಇವರ ಪುತ್ರ ಮಹೇಶ್ ಬಾಬು ತೆಲುಗು ಸಿನಿಮಾ ರಂಗದ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.
Advertisement
ಮಹೇಶ್ ಬಾಬು ಕುಟುಂಬದಲ್ಲಿ ಈ ವರ್ಷ ಸೂತಕದ ವರ್ಷವೆಂದೇ ಹೇಳಬಹುದು. ಜನವರಿಯಲ್ಲಿ ಕೃಷ್ಣ ಅವರ ಹಿರಿಯ ಮಗ ರಮೇಶ್ ಬಾಬು ನಿಧನಹೊಂದಿದ್ದರೆ, ಎರಡು ತಿಂಗಳ ಹಿಂದೆಯಷ್ಟೇ ಕೃಷ್ಣ ಅವರ ಎರಡನೇ ಪತ್ನಿ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದಾರೆ. ಮೊದಲನೇ ಹೆಂಡತಿ ವಿಜಯ ನಿರ್ಮಲಾ ನಾಲ್ಕು ವರ್ಷಗಳ ಹಿಂದೆ ಬಾರದ ಲೋಕಕ್ಕೆ ಹೋಗಿದ್ದಾರೆ. ಇದೀಗ ಕೃಷ್ಣ ಕೂಡ ಕಣ್ಮರೆಯಾಗಿದ್ದಾರೆ.