– ಕನ್ನಡದ ಕಂದೀಲು ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಪ್ರಶಸ್ತಿ
ನವದೆಹಲಿ: ಮಲಯಾಳಂ ಖ್ಯಾತ ನಟ ಮೋಹನ್‌ಲಾಲ್ (Mohanlal) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ನೀಡಿ, ಗೌರವಿಸಿದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಮಂಗಳವಾರ (ಸೆ.23) 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಇದನ್ನೂ ಓದಿ: ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ತೆಗೆದುಕೊಂಡ ನನಗೆ ಜವಾಬ್ದಾರಿ ಹೆಚ್ಚಾಗಿದೆ. ಈ ಪ್ರಶಸ್ತಿಯನ್ನು ಮಲಯಾಳಂ ಚಿತ್ರರಂಗಕ್ಕೆ ಅರ್ಪಿಸುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಜವಾನ್ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ (Shah Rukh Khan) ಹಾಗೂ 12th ಫೇಲ್ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮ್ಯಾಸ್ಸೆ (Vikrant Massey) ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಿಸಸ್ ಚಟರ್ಜಿ ವರ್ಸಸ್ ನಾರ್ವೆ ಚಿತ್ರದ ನಟನೆಗಾಗಿ ರಾಣಿ ಮುಖರ್ಜಿ (Rani Mukerji) ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು. ಕನ್ನಡದ ಕಂದೀಲು ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.ಇದನ್ನೂ ಓದಿ: ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ