ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ರಾತ್ರಿ ಮಂಗಳೂರಿಗೆ ಬಂದಿಳಿದಿದ್ದಾರೆ. ಖಾಸಗಿ ಕಾರ್ಯಕ್ರಮ ಮತ್ತು ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ ಮಂಗಳೂರು ಏರ್ ಪೋರ್ಟಿಗೆ ಬಂದಾಗ ಅಸಂಖ್ಯಾತ ಅಭಿಮಾನಿಗಳು ಅವರಿಗಾಗಿ ಕಾಯುತ್ತಿದ್ದರು. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ರಜನಿಕಾಂತ್ ನಟನೆಯ ಜೈಲು ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದು, ಜೊತೆಗೆ ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಮಂಗಳೂರಿಗೆ ಸಿನಿಮಾ ಚಿತ್ರೀಕರಣ ನಡೆಯಲಿದೆ. ಈ ಶೂಟಿಂಗ್ ಮಧ್ಯೆಯೂ ಅವರು ಮಂಗಳೂರಿನ ಪ್ರಮುಖ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಟಿ ಸಮಂತಾ
ರಜನಿಕಾಂತ್ ಜೊತೆ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಲಿದ್ದು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ಇಂದು ಶಿವರಾಜ್ ಕುಮಾರ್ ಕೂಡ ಮಂಗಳೂರಿಗೆ ತೆರಳಿದ್ದಾರೆ. ರಜನಿ ಮತ್ತು ಶಿವಣ್ಣ ಭಾಗದ ಚಿತ್ರೀಕರಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಭದ್ರತೆಯ ದೃಷ್ಟಿಯಿಂದ ಚಿತ್ರತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k