ಮೈಸೂರು: ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ಸ್ಟಾರ್ ರಜನಿಕಾಂತ್ (Superstar Rajanikanth) ಅವರಿಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಚಿತ್ರೀಕರಣ ಸಂಬಂಧ ಮೈಸೂರಿನಲ್ಲಿ ತಂಗಿರುವ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿ ನಟ ರಜನಿಕಾಂತ್ ಅವರಿಗೆ ಹೂವಿನ ಹಾರ ಹಾಕಿ ಗೌರವಪೂರ್ವಕವಾಗಿ ಸನ್ಮಾನಿಸಿದರು. ಇದನ್ನೂ ಓದಿ: ಉದ್ಯೋಗ ಖಾತ್ರಿ ನಕಲಿ ಜಿಪಿಎಸ್ ಫೋಟೋ – ತನಿಖೆಗೆ ಈಶ್ವರ ಖಂಡ್ರೆ ಸೂಚನೆ
ಇನ್ನೂ ಸೂಪರ್ಸ್ಟಾರ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದ ವಿವರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.

