ಬೆಂಗಳೂರು: ಇಂದಿನಿಂದ ಜುಲೈ 4ರವರೆಗೆ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ(SSLC) ಪೂರಕ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ಇಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.
Advertisement
ಪೂರಕ ಪರೀಕ್ಷೆಗೆ ಒಟ್ಟು 94,649 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 63,363 ಬಾಲಕರು ಹಾಗೂ 31,283 ಬಾಲಕಿಯರು ಪರೀಕ್ಷೆ ನೋಂದಣಿಯಾಗಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪ್ರಮುಖ ಪರೀಕ್ಷೆಗೆ ಇದ್ದ ಕೋವಿಡ್ ಮಾರ್ಗಸೂಚಿಗಳೇ ಪೂರಕ ಪರೀಕ್ಷೆಗೆ ಇರಲಿವೆ. ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್‍ನಲ್ಲಿ ನಾಯಿಗಳಿಗೆ ನಿಷೇಧ
Advertisement
Advertisement
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಉಚಿತ ಬಸ್ ಸೇವೆ ನೀಡುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿಗಳು ಎಕ್ಸಾಂ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತೆ ಅಂತ ಎಸ್‍ಎಸ್‍ಎಲ್ಸಿ ಬೋರ್ಡ್ ತಿಳಿಸಿದೆ.