ಹಾಸನ: ಸೇಬು ಹಾಗೂ ಮೂಸಂಬಿ ಹಣ್ಣಿನ ಒಳಗೆ ಗಾಂಜಾ ಇಟ್ಟು ಕೈದಿಗಳಿಗೆ ಪೂರೈಸಲು ಯತ್ನಿಸಿದ ಮೂವರು ಆರೋಪಿಗಳನ್ನು ಹಾಸನ (Hassan) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತರಕಾರಿ ವ್ಯಾಪಾರಿ ತಬ್ರೇಜ್ (28), ಗುಜರಿ ವ್ಯಾಪಾರಿ ವಾಸಿಂ (21) ಹಾಗೂ ರಕೀಬ್ ಎಂದು ಗುರುತಿಸಲಾಗಿದೆ. ಆರೋಪಿಗಳು ಜಿಲ್ಲಾ ಕಾರಾಗೃಹದಲ್ಲಿರುವ (Jail) ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಪ್ಲ್ಯಾನ್ ಮಾಡಿ ಸೇಬು ಹಾಗೂ ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂಜಾ ಸೊಪ್ಪನ್ನು ಇಟ್ಟು ಸ್ಟಿಕ್ಕರ್ ಅಂಟಿಸಿದ್ದರು. ಬಳಿಕ ಹಣ್ಣುಗಳನ್ನು ಜೈಲಿನ ಹಿಂಬದಿಯಿಂದ ಕಾಂಪೌಂಡ್ ಒಳಗೆ ಎಸೆಯಲು ಹೊಂಚು ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಡಿಎಂಕೆ ಮುಖಂಡನ ಮೇಲೆ ಹಲ್ಲೆ ನಡೆದಿದ್ದ ಹೋಟೆಲ್‍ನಲ್ಲಿ ವಿಶೇಷ ಪೂಜೆ
Advertisement
Advertisement
ಹೊಂಚು ಹಾಕಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಹಾಸನ ನಗರ ಠಾಣೆ ಸಿಪಿಐ ರೇವಣ್ಣ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಬಳಿಕ ಬ್ಯಾಗ್ ಪರಿಶೀಲಿಸಿದಾಗ ಗಾಂಜಾ ತುಂಬಿದ್ದ 3 ಸೇಬು ಮತ್ತು 2 ಮೂಸಂಬಿ ಹಣ್ಣು ಪತ್ತೆಯಾಗಿದೆ. ವಿಚಾರಣೆ ವೇಳೆ ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ.
Advertisement
Advertisement
ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಜೈಲಿನ ಮೇಲೆ ದಾಳಿ ನಡೆಸಿದ್ದ ಪೊಲೀಸರು ಮೊಬೈಲ್ ಹಾಗೂ ಗಾಂಜಾ ವಶಪಡಿಸಿಕೊಂಡಿದ್ದರು. ದಾಳಿ ಬೆನ್ನಲ್ಲೇ ಜೈಲಿನ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಐಸಿಯು ವೈದ್ಯರ ಕೊರತೆ!
Web Stories