ಕಾಫಿನಾಡಲ್ಲಿ ಕಾವೇರಿ ಕಿಚ್ಚು – ಸುರಿವ ಮಳೆಯಲ್ಲೂ ಹಮಾಲಿ ಕಾರ್ಮಿಕರ ಪ್ರತಿಭಟನೆ

Public TV
1 Min Read
KarnatakaBandh

ಚಿಕ್ಕಮಗಳೂರು: ಕರ್ನಾಟಕ ಬಂದ್‍ಗೆ (Karnataka Bandh) ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ನಗರದಲ್ಲಿಯೂ (Chikkamagaluru) ಸಹ ಹಮಾಲಿ ಕಾರ್ಮಿಕರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ 300ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರ ಸಂಘಟನೆಗಳು ಭಾಗಿಯಾಗಿವೆ. ಈ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದ್ದಾರೆ. ಅಲ್ಲದೇ ಈ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಿ ನಾಡಿನ ರೈತರ ಹಿತವನ್ನು ಕಾಪಾಡಬೇಕು. ಕಾವೇರಿ ನೀರನ್ನು (Cauvery Water) ಈಗಲೇ ಈ ಪ್ರಮಾಣದಲ್ಲಿ ಹರಿಸಿದರೆ ಮಳೆ ಇಲ್ಲದ ಕಾರಣ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಏರ್‌ಪೋರ್ಟ್ ಒಳಗಡೆ ಪ್ರತಿಭಟನೆಗೆ ಯತ್ನ – ಐವರು ಪೊಲೀಸರ ವಶಕ್ಕೆ

ನಗರದ ಐ.ಜಿ.ರಸ್ತೆಯಲ್ಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಭಾರೀ ಮಳೆ ಸುರಿದಿದೆ. ಆದರೂ ಕಾರ್ಮಿಕರು ಮಳೆಯ ಮಧ್ಯೆಯೇ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲೂ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತಿದೆ. ಪ್ರತಿಭಟನೆ ವೇಳೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ನಡುವೆಯೇ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾಡಿನ ರೈತರಿಗೆ ನೀರಿಲ್ಲದೆ ಭತ್ತ ಬೆಳೆಯುವ ಭಾಗ್ಯ: ಬಿಜೆಪಿ ಆಕ್ರೋಶ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article