ಮಾವು ಬೆಳೆಗೆ ಬೆಂಬಲ ಬೆಲೆ ಇಂದು ಸಂಪುಟದಲ್ಲಿ ನಿರ್ಧಾರ: ಬೈರತಿ ಸುರೇಶ್

Public TV
2 Min Read
MANGO 1

ಬೆಂಗಳೂರು: ಮಾವು ಬೆಳೆಗೆ (Mango Crop) ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ.

ಕೋಲಾರ (Kolar) ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವನ್ನು ಬೆಳೆಯುತ್ತಾರೆ. ಈ ಬಾರಿ ಮಾವು ಬೆಲೆ ತೀವ್ರ ಕುಸಿತ ಉಂಟಾಗಿರುವುದರಿಂದ ರೈತರು (Farmers) ಕಂಗಾಲಾಗಿದ್ದಾರೆ. ಈ ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

Byrathi Suresh

ರಾಜ್ಯದಲ್ಲಿ ಅದರಲ್ಲೂ ಕೋಲಾರದಲ್ಲಿ ಬೆಳೆಯುತ್ತಿರುವ ತೋತಾಪುರಿ ಸೇರಿದಂತೆ ಇತರೆ ಮಾವು ಬೆಳೆ ಪ್ರವೇಶವನ್ನು ಆಂಧ್ರಪ್ರದೇಶ ಸರ್ಕಾರ ನಿರ್ಬಂಧಿಸಿರುವುದರಿಂದ ರೈತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈ ನಿರ್ಬಂಧವನ್ನು ತೆರವುಗೊಳಿಸುವಂತೆ ನಮ್ಮ ಮುಖ್ಯಮಂತ್ರಿಗಳು ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ಎರಡು ಬಾರಿ ಪತ್ರ ಬರೆದು ಮನವಿ ಮಾಡಿದ್ದರೂ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: Bengaluru | ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಸ್ಕೂಲ್ ವ್ಯಾನ್ – ಸವಾರ ಬಚಾವ್

ಆಂಧ್ರ ಪ್ರದೇಶ ಸರ್ಕಾರ ರಾಜ್ಯದ ಮಾವು ಬೆಳೆಗೆ ನಿರ್ಬಂಧ ಹೇರುವ ಮೂಲಕ ನಮ್ಮ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಇದು ಅಮಾನವೀಯ ಕ್ರಮವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೊಡುಕೊಳ್ಳುವಿಕೆ ಇರಬೇಕು. ಆದರೆ, ಆಂಧ್ರ ಪ್ರದೇಶ ನಮ್ಮ ಬೆಳೆಗೆ ನಿರ್ಬಂಧ ಹೇರಿರುವುದರಿಂದ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯವೂ ಆ ರಾಜ್ಯದ ಬೆಳೆಗಳ ಪ್ರವೇಶಕ್ಕೆ ನಿರ್ಬಂಧಿಸುವ ಕುರಿತು ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

ಇಂದು ಬೆಂಬಲ ಬೆಲೆ ನಿರ್ಧಾರ:
ಕೋಲಾರದ ಮಾವು ಬೆಳೆಗಾರರೊಂದಿಗೆ ಸಭೆ ನಡೆಸಿ ಅವರ ಸಂಕಷ್ಟಗಳನ್ನು ಆಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಬೆಳೆಗಾರರ ನೆರವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬೆಳೆಗಾರರನ್ನು ಬೆಲೆ ಕುಸಿತದಿಂದ ಪಾರು ಮಾಡುವ ಉದ್ದೇಶದಿಂದ ಅವರಿಗೆ ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಲಾಗಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಅಸ್ಸಾಂ | ಧುಬ್ರಿಯಲ್ಲಿ ಗೋವಿನ ತಲೆ ಪತ್ತೆ ಕೇಸ್ – 30ಕ್ಕೂ ಹೆಚ್ಚು ಜನ ಅರೆಸ್ಟ್‌

Share This Article