ಮೈಸೂರು: ಮೈಕ್ ಹಾಕುವ ದೇವಸ್ಥಾನಗಳಿಗೆ ನೋಟಿಸ್ ನೀಡುತ್ತಿದ್ದಾರೆ. ಆದರೆ ಮಸೀದಿಗೆ ಯಾಕೆ ಕೊಡಲ್ಲ. ಈ ರೀತಿ ಮಾಡುತ್ತಿರುವ ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಸುಪ್ರಭಾತಕ್ಕೆ ಚಾಲನೆ ನೀಡಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮಸೀದಿ ಮೇಲಿನ ಮೈಕ್ ತೆಗೆಸಲು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ಸರ್ಕಾರ ಈ ಬಗ್ಗೆ ಕ್ರಮ ಜರುಗಿಸಲಿಲ್ಲ. ಹೀಗಾಗಿ ದೇವಾಲಯಗಳಲ್ಲಿ ಸುಪ್ರಭಾತಕ್ಕೆ ಚಾಲನೆ ನೀಡಿದ್ದೇವೆ ಎಂದು ತಿಳಿಸಿದರು.
Advertisement
Advertisement
ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಇರಲಿ. ಮುಸ್ಲಿಮರ ಸೊಕ್ಕು, ಹಠದಿಂದ ಜನರಿಗೆ ತೊಂದರೆ ಆಗುತ್ತಿದೆ. ಇದು ತಾಲಿಬಾನ್ ಅಲ್ಲ, ಪಾಕಿಸ್ತಾನವಲ್ಲ. ಈ ರೀತಿ ಹಠ ಸರಿಯಲ್ಲ. ಸಂಘರ್ಷಕ್ಕೆ ನೀವೇ ಅವಕಾಶ ಮಾಡಿ ಕೊಡುತ್ತಿದ್ದೀರಿ. ಈ ಆಂದೋಲನ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಮೊಳಗಿದ ಸುಪ್ರಭಾತ
Advertisement
Advertisement
ಅಜಾನ್, ಪ್ರಾರ್ಥನೆಗೆ ವಿರುದ್ಧವಿಲ್ಲ. ಆದರೆ ಶಬ್ದಕ್ಕೆ ವಿರೋಧವಿದೆ. ಇದರಿಂದಾಗಿ ಮುಂಜಾನೆಯಿಂದಲೇ ಪ್ರಾರ್ಥನೆ ಮಾಡಿದ್ದೇವೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ. ಇದನ್ನೂ ಓದಿ: ಪ್ರಸಿದ್ಧ ಸಿದ್ಧಾರೂಢ ಮಠದಲ್ಲಿ ಇಂದಿನ ವಿಶೇಷ ಪೂಜೆಯ ಜೊತೆಗೆ ಮಂತ್ರಘೋಷ