ಮುಸ್ಲಿಂ ಮೀಸಲಾತಿ ರದ್ದು – ಅರ್ಜಿ ವಿಚಾರಣೆ ಒಂದು ವಾರ ಮುಂದೂಡಿಕೆ

Public TV
1 Min Read
SUPREME COURT

ನವದೆಹಲಿ : 2ಬಿ ಮುಸ್ಲಿಂ ಮೀಸಲಾತಿ (Muslim Reservation) ರದ್ದು ಮಾಡಿದ ರಾಜ್ಯ ಸರ್ಕಾರದ (Karnataka Government) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಮುಂದಿನ ಮಂಗಳವಾರಕ್ಕೆ ಮುಂದೂಡಿದೆ. ರಾಜ್ಯ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮೇರೆಗೆ ಒಂದು ವಾರ ವಿಚಾರಣೆ ಮುಂದೂಡಿಕೆಯಾಗಿದೆ.

ಇಂದು ಪ್ರಕರಣ ವಿಚಾರಣೆ ಆರಂಭಕ್ಕೂ ಮುನ್ನ ಅರ್ಜಿ ಬಗ್ಗೆ ಪ್ರಸ್ತಾಪಿಸಿದ ತುಷಾರ್ ಮೆಹ್ತಾ, ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಮಾಹಿತಿಯುಳ್ಳ ಅಫಿಡವಿಟ್ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಇನ್ನೊಂದು ವಾರ ಸಮಯ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿವಾದಿಯಾಗಿದ್ದ ಕಪಿಲ್ ಸಿಬಲ್‌ ಕೂಡಾ ಒಪ್ಪಿಗೆ ಸೂಚಿಸಿದ ಹಿನ್ನಲೆ ವಿಚಾರಣೆಯನ್ನು ಮುಂದೂಡಲಾಯಿತು. ಇದನ್ನೂ ಓದಿ: ವೇಶ್ಯಾವಾಟಿಕೆ ದಂಧೆ: ಕಿರುತೆರೆ ನಟಿ ಆರತಿ ಅರೆಸ್ಟ್

 

ಕಳೆದ ವಿಚಾರಣೆಯಲ್ಲಿ ಸರ್ಕಾರದ ಮೀಸಲಾತಿ ನಿರ್ಧಾರ ದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕೋರ್ಟ್ ಮುಂದಿನ ವಿಚಾರಣೆ ನಡೆವರೆಗೂ ಹೊಸ ಮೀಸಲಾತಿ ಅನ್ವಯ ಯಾವುದೇ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ ನೀಡದಂತೆ ಸೂಚನೆ ನೀಡಿತ್ತು. ಇದನ್ನು ಖಾತ್ರಿಪಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದಕ್ಕೆ ಒಪ್ಪಿಕೊಂಡಿದ್ದ ಸರ್ಕಾರದ ಪರ ವಕೀಲರು ಹೊಸ ಮೀಸಲಾತಿ ನಿಯಮ ಸದ್ಯ ಜಾರಿ ಮಾಡುವುದಿಲ್ಲ ಎಂದು ತಿಳಿಸಿದ್ದರು.

 

Share This Article