ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂನಿಂದ ಕರ್ನಾಟಕಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಹೆಚ್ಚುವರಿಯಾಗಿ ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು ಸಿಕ್ಕಿದೆ.
2007ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎಎಂ ಖಾನ್ವೀಲ್ಕರ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ.
Advertisement
ತೀರ್ಪುನಲ್ಲಿದೆ ಏನಿದೆ
– ನ್ಯಾಯಾಧಿಕರಣ ಅನುಸರಿಸಿರುವ ಕ್ರಮ ಸರಿಯಾಗಿಯೇ ಇದ್ದು ನದಿಗಳು ರಾಷ್ಟ್ರದ ಸಂಪತ್ತು. ಇದು ರಾಜ್ಯಗಳ ಸ್ವತ್ತಲ್ಲ ನದಿಗಳ ಮೇಲೆ ಪ್ರಭುತ್ವ ಸಾಧಿಸುವ ಅಧಿಕಾರ ಯಾರಿಗೂ ಇರಲ್ಲ.
– ಎರಡೂ ರಾಜ್ಯಗಳು ಸಮಾನ ಧರ್ಮವನ್ನು ಪಾಲನೆ ಮಾಡಬೇಕು. ಬ್ರಿಟಿಷ್ ಕಾಲದ ಒಪ್ಪಂದಗಳ ಬಗ್ಗೆ ನ್ಯಾಯಮೂರ್ತಿಗಳ ಉಲ್ಲೇಖ
– ಸಂವಿಧಾನದಡಿ ಕರ್ನಾಟಕಕ್ಕೆ ಚೌಕಾಸಿ ಮಾಡುವ ಅಧಿಕಾರವಿದೆ. ಪುದುಚೇರಿ ಕೇರಳಕ್ಕೆ ನೀಡಿರುವ ನೀರು ಹಂಚಿಕೆ ಸರಿಯಾಗಿದೆ
– ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆ ಸರಿಯಿದೆ. ನೀರು ಹಂಚುವಾಗ ತಮಿಳುನಾಡಿನ 20 ಟಿಎಂಸಿ ಅಂತರ್ಜಲ ಪರಿಗಣಿಸಬೇಕು
Advertisement
Advertisement
– ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು. ಕರ್ನಾಟಕ- ಕರ್ನಾಟಕ ನೀರಾವರಿ ಪ್ರದೇಶ ಹೆಚ್ಚುವರಿ ಮಾಡಿಕೊಳ್ಳಬಹುದು. ತಮಿಳುನಾಡಿಗೆ 177 ಟಿಎಂಸಿ ನೀರು ಬಿಡುಗಡೆ ಮಾಡಬೇಕು
– ಕಾವೇರಿ ನಿರ್ವಹಣಾ ಮಂಡಳಿ ರಚನೆ ನಾವು ಆದೇಶ ನೀಡುವುದಿಲ್ಲ. ನಿರ್ವಹಣಾ ಮಂಡಳಿಯ ಸ್ಥಾಪನೆಯ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ.
– ಕರ್ನಾಟಕ ನೀರಾವರಿ ಪ್ರದೇಶ ಹೆಚ್ಚುವರಿ ಮಾಡಿಕೊಳ್ಳಬಹುದು. ತಮಿಳುನಾಡಿಗೆ 177 ಟಿಎಂಸಿ ನೀರು ಬಿಡುಗಡೆ ಮಾಡಬೇಕು
– ಕರ್ನಾಟಕದ ಮೇಲ್ಮನವಿಗೆ ಸ್ವಲ್ಪ ಮಟ್ಟಿಗೆ ಗೆಲುವು. ಮುಂದಿನ 15 ವರ್ಷಕ್ಕೆ ನ್ಯಾಯಾಧಿಕರಣ ತೀರ್ಪು ಅನ್ವಯ
– 1924ರ ಒಪ್ಪಂದ ಸಂವಿಧಾನ ಬದ್ಧವಾಗಿದೆ ಇದನ್ನೂ ಓದಿಒ: 1924ರ ಬ್ರಿಟಿಷರ ಒಪ್ಪಂದದಲ್ಲಿ ಏನಿತ್ತು?
Advertisement
ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10,ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.
ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು.
2013ರಲ್ಲಿ ಅಧಿಸೂಚನೆ ಪ್ರಕಟ
ಐತೀರ್ಪಿನ ಆದೇಶದ ಅನ್ವಯ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕಿತ್ತು. ಆದರೆ ತೀರ್ಪು ಬಂದು 5 ವರ್ಷ ಕಳೆದರೂ ನಿರ್ವಹಣಾ ಮಂಡಳಿಯನ್ನು ರಚಿಸದ್ದಕ್ಕೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಫೆ.20ರ ಒಳಗಡೆ ಅಂತಿಮ ಆದೇಶವನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಬೇಕೆಂದು 2013ರ ಫೆ.4ರಂದು ಖಡಕ್ ಆದೇಶವನ್ನು ಹೊರಡಿಸಿತು. ಈ ಆದೇಶದ ಅನ್ವಯ ಅಂತಿಮವಾಗಿ ಕೇಂದ್ರ ಸರ್ಕಾರ ಫೆ.19ರಂದು ಗೆಜೆಟ್ ಅಧಿಸೂಚನೆ ಹೊರಡಿಸಿತು.
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secon ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.