ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ. ಈ ಬೆನ್ನಲ್ಲೇ ಹಿಂದೂಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.
ವಾರಣಾಸಿಯ ಜ್ಞಾನವಾಪಿ (Gyanvapi mosque) ʼವಜುಖಾನಾʼ (Wazukhana) ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮಸೀದಿ ಸಂಕೀರ್ಣದ ವಜುಖಾನಾದ ಸಂಪೂರ್ಣ ಪ್ರದೇಶವನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಈ ಕಟ್ಟಡದಲ್ಲಿ ಶಿವಲಿಂಗವಿದೆ ಎಂದು ಹಿಂದೂಗಳು ಹೇಳಿಕೊಂಡಿದ್ದರು. ಜ್ಞಾನವಾಪಿಯ ಮುಚ್ಚಿದ ಪ್ರದೇಶವನ್ನು ತೆರೆಯಬೇಕು ಮತ್ತು ತಕ್ಷಣ ಸ್ವಚ್ಛಗೊಳಿಸಬೇಕು ಎಂದು ಹಿಂದೂಗಳು ಮನವಿ ಸಲ್ಲಿಸಿದ್ದರು. ಇದೀಗ ಹಿಂದೂಗಳ ಬೇಡಿಕೆಯನ್ನು ಪುರಸ್ಕರಿಸಿ ಸುಪ್ರೀಂ ಕೋರ್ಟ್ ಸ್ವಚ್ಛತೆಗೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸ್ವಚ್ಛತೆಗೆ ಕೋರ್ಟ್ ಅನುಮತಿ ನೀಡಿದೆ. ಇದನ್ನೂ ಓದಿ: ಕೃಷ್ಣ ಜನ್ಮಭೂಮಿ-ಶಾಹೀ ಈದ್ಗಾ ಮಸೀದಿ ಕೇಸ್; ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಸುಪ್ರೀಂಕೋರ್ಟ್ ಆದೇಶದ ಮೇರೆಗೆ 2022 ರಲ್ಲಿ ‘ವಜುಖಾನಾ’ ಪ್ರದೇಶವನ್ನು ಸೀಲ್ ಮಾಡಲಾಗಿತ್ತು. ಇಲ್ಲಿ ‘ಶಿವಲಿಂಗ’ ಆಕಾರದ ಕಲ್ಲು ಪತ್ತೆಯಾಗಿದ್ದು, ನಂತರ ಅದನ್ನು ಮುಚ್ಚಲು ಆದೇಶ ನೀಡಲಾಗಿತ್ತು. 16 ಮೇ 2022 ರಂದು ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಕೊಳವೊಂದು ಪತ್ತೆಯಾಗಿತ್ತು. ಇದನ್ನು ಹಿಂದೂಗಳು ‘ಶಿವಲಿಂಗ’ ಎಂದು ವಾದಿಸಿದರೆ, ಮುಸ್ಲಿಮರು ‘ಕಾರಂಜಿ’ ಎಂದು ಪ್ರತಿಪಾದಿಸಿದ್ದರು.