ನವದೆಹಲಿ/ ಬಳ್ಳಾರಿ: ಅಕ್ರಮ ಗಣಿಗಾರಿಕೆಯ (Illegal Mining) ಪ್ರಮುಖ ಆರೋಪಿ ಮಾಜಿ ಸಚಿವ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ (Ballari) ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ (Supreme Court) ತೆರವು ಮಾಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.
Advertisement
Advertisement
ನಿಷೇಧ ಹೇರಿದ್ದು ಯಾಕೆ?
ಆಂಧ್ರದ ಅನಂತಪುರ, ಕರ್ನೂಲು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 2011 ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು.
Advertisement
ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಆನಂತಪುರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ (CBI) ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
Advertisement
ಈ ಮಧ್ಯೆ ಮಗಳ ಮದುವೆ, ಮೊಮ್ಮೊಗಳ ನಾಮಕರಣ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಮಾತ್ರ ಕೋರ್ಟ್ ಅನುಮತಿ ನೀಡಿತ್ತು. 2021ರ ನವೆಂಬರ್ ನಲ್ಲಿ ಕೊನೆಯದಾಗಿ ಬಳ್ಳಾರಿಗೆ ಜನಾರ್ದನ ರೆಡ್ಡಿ ಬಳ್ಳಾರಿಗೆ ಆಗಮಿಸಿದ್ದರು
2011ರಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಜನಾರ್ದನ ರೆಡ್ಡಿ ಮೂರು ವರ್ಷ ನಾಲ್ಕು ತಿಂಗಳು ಜೈಲು ವಾಸ ಅನುಭವಿಸಿದ್ದರು. ಜೈಲುವಾಸದ ಬಳಿಕ 2015 ರಲ್ಲಿ ಬಿಡುಗಡೆಯಾಗಿದ್ದರು. ಬಳ್ಳಾರಿ ಜಿಲ್ಲೆಯಿಂದ ದೂರವೇ ಇದ್ದ ಜನಾರ್ದನ ರೆಡ್ಡಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.