ನವದೆಹಲಿ: ಮಣಿಪುರದಲ್ಲಿ (Manipur) ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ (Violence) ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರವನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಏಳು ದಿನಗಳಲ್ಲಿ ವಿಸ್ತೃತ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ (D.Y.Chandarchud) ನೇತೃತ್ವದ ತ್ರಿ ಸದಸ್ಯ ಪೀಠ, ಮಣಿಪುರದ ಪರಿಸ್ಥಿತಿ ಬಗ್ಗೆ ಮಾಹಿತಿ ಕೇಳಿತು. ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ಒಗಿಸಿದೆ. ಪರಿಸ್ಥಿತಿ ಹಂತ ಹಂತವಾಗಿ ನಿಯಂತ್ರಣಕ್ಕೆ ಬರುತ್ತಿದೆ ಎಂದರು. ಇದಲ್ಲದೇ ಭದ್ರತೆಗೆ ಸಿವಿಲ್ ಪೊಲೀಸರ ಹೊರತಾಗಿ ಮಣಿಪುರ ರೈಫಲ್‌ಗಳು, ಸಿಎಪಿಎಫ್‌ನ ಕಂಪನಿಗಳು, ಸೇನೆಯ 114 ಕಾಲಂಗಳು ಮತ್ತು ಮಣಿಪುರ ಕಮಾಂಡೋಗಳನ್ನು ನಿಯೋಜಿಸಿದೆ. ನಿಧಾನವಾದರೂ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಪ್ಪಿತ ಸೆಕ್ಸ್ ವಯೋಮಿತಿ 18 ರಿಂದ 16 ಕ್ಕೆ ಇಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಒತ್ತಾಯ
Advertisement
Advertisement
ನಿರಾಶ್ರಿತ ಮತ್ತು ಹಿಂಸಾಚಾರ ಪೀಡಿತ ಜನರಿಗೆ ಪುನರ್ವಸತಿ ಶಿಬಿರಗಳನ್ನು ನಿರ್ಮಿಸಲು ತೆಗೆದುಕೊಂಡ ಕ್ರಮಗಳು, ಭದ್ರತಾ ಪಡೆಗಳ ನಿಯೋಜನೆ ಮತ್ತು ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ವಿವರವಾಗಿ ವರದಿಯನ್ನು ಏಳು ದಿನಗಳಲ್ಲಿ ನೀಡಬೇಕು ಎಂದು ಸೂಚಿಸಿದೆ ಪೀಠ ಜುಲೈ 10ಕ್ಕೆ ವಿಚಾರಣೆಯನ್ನು ಮುಂದೂಡಿತು. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಮಾನನಷ್ಟ ಮೊಕದ್ದಮೆ
Advertisement
Advertisement
ಅಲ್ಪಸಂಖ್ಯಾತ ಕುಕಿ ಬುಡಕಟ್ಟು ಜನಾಂಗದವರಿಗೆ ಸೇನೆಯ ರಕ್ಷಣೆ ಮತ್ತು ಅವರ ಮೇಲೆ ದಾಳಿ ನಡೆಸುತ್ತಿರುವ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್‌ಜಿಒ ಸಲ್ಲಿಸಿದ್ದ ಮನವಿ ಸೇರಿದಂತೆ ಮಣಿಪುರ ಹಿಂಸಾಚಾರದ ಕುರಿತ ಅರ್ಜಿಗಳನ್ನು ನ್ಯಾಯಾಲಯ ಆಲಿಸುತ್ತಿದೆ. ಮಣಿಪುರದಲ್ಲಿ ಮೇ 3ರಂದು ಪ್ರಾರಂಭವಾದ ಮೈಟೆಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 120 ಜನರು ಸಾವನ್ನಪ್ಪಿದ್ದು, 3,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: PSI scam – ಇಂದು ಹೈಕೋರ್ಟ್‍ನಲ್ಲಿ ಮರುಪರೀಕ್ಷೆ ಅರ್ಜಿ ವಿಚಾರಣೆ
Web Stories