ನವದೆಹಲಿ: ಚುನಾವಣಾ (Election) ಸಮಯದಲ್ಲಿ ರಾಜಕೀಯ ಪಕ್ಷಗಳು (Political Parties) ಘೋಷಿಸುವ ಉಚಿತ ಭರವಸೆಗಳಿಗೆ (Freebies) ನಿರ್ಬಂಧ ಹೇರುವಂತೆ ಸಲ್ಲಿಸಿದ್ದ ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ನಿವಾಸಿ ಶಶಾಂಕ್ ಜೆ ಶ್ರೀಧರ್ ಅವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾ. ಜೆಬಿ ಪರ್ದಿವಾಲಾ ಮತ್ತು ನ್ಯಾ. ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠ ನೋಟಿಸ್ ಜಾರಿ ಮಾಡಿ ಅಭಿಪ್ರಾಯ ಸೂಚಿಸುವಂತೆ ತಿಳಿಸಿದೆ.
Advertisement
Advertisement
ಉಚಿತ ಕೊಡುಗೆಗಳ ಭರವಸೆಯಿಂದ ಸಾರ್ವಜನಿಕ ಖಜಾನೆಯ ಮೇಲೆ ಗಮನಾರ್ಹ ಮತ್ತು ಲೆಕ್ಕಿಸಲಾದ ಆರ್ಥಿಕ ಹೊರೆಯ ಬೀಳುತ್ತದೆ. ಅಷ್ಟೇ ಅಲ್ಲದೇ ಚುನಾವಣಾ ಪೂರ್ವ ಭರವಸೆಗಳ ಈಡೇರಿಕೆಯನ್ನು ಖಚಿತಪಡಿಸಿಕೊಳ್ಳಲು ಯಾವುದೇ ಕಾರ್ಯವಿಧಾನವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
Advertisement
ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳು ಉಚಿತ ಭರವಸೆಗಳನ್ನು ನೀಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ.
Advertisement