Corona

ಕೋವಿಡ್‍ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ವಿಳಂಬ- ಕೇಂದ್ರಕ್ಕೆ ಸುಪ್ರೀಂ ತರಾಟೆ

Published

on

Share this

ನವದೆಹಲಿ: ಕೋವಿಡ್‍ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಸುಪ್ರೀಂಕೋರ್ಟ್ ಕೋವಿಡ್-19ನಿಂದ ಮರಣ ಹೊಂದಿದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಜೂನ್ 30ರಂದು ಆದೇಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಮತ್ತು ಮರಣ ದೃಢೀಕರಣ ಪತ್ರಗಳ ಜಾರಿಗೆ ಮಾರ್ಗಸೂಚಿ ರೂಪಿಸದೇ ಇರುವುದಕ್ಕೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದನ್ನೂ ಓದಿ: ಈ ಬಾರಿ ಸರಳ, ಸಾಂಪ್ರದಾಯಿಕ ದಸರಾ ಆಚರಣೆ

ಈ ಬಗ್ಗೆ ಸೆಪ್ಟೆಂಬರ್ 11ರೊಳಗೆ ಅಫಿಡವಿಟ್ ಸಲ್ಲಿಸಬೇಕೆಂದು ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಲ್ಲದೆ ನೀವು ಮಾರ್ಗಸೂಚಿ ರೂಪಿಸುವುದರೊಳಗೆ ಮೂರನೇ ಅಲೆ ಕೂಡ ಬಂದು ಹೋಗಬಹುದೇನೋ ಎಂಬ ಅನುಮಾನವನ್ನೂ ನ್ಯಾಯಪೀಠ ವ್ಯಕ್ತಪಡಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,220 ಮಂದಿಗೆ ಕೊರೊನಾ – 19 ಜನ ಸಾವು

ಭಾರತದಲ್ಲಿ ಈಗಾಗಲೇ 3 ಕೋಟಿಗೂ ಅಧಿಕ ಮಂದಿಗೆ ಕೊರೊನಾ ಬಂದಿದ್ದು, 4 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ವಿಶ್ವದಾದ್ಯಂತ 21 ಕೋಟಿಗೂ ಅಧಿಕ ಮಂದಿಗೆ ಕೊರೊನಾ ದೃಢಪಟ್ಟಿದ್ದು,  45 ಲಕ್ಷಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications