ನವದೆಹಲಿ: ದೇಶದಲ್ಲೂ 18 ವರ್ಷದೊಳಗಿನ ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಸಂಬಂಧ, ಶಾಸನಬದ್ಧ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠವು `ಜಸ್ಟ್ ರೈಟ್ಸ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿತು. ಈ ವೇಳೆ, ಡಿಜಿಟಲ್ ಪರಿಸರದಲ್ಲಿ ಮಕ್ಕಳು ಎದುರಿಸುವ ಅಪಾಯಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಒಪ್ಪಿಕೊಂಡರು. ಇದನ್ನೂ ಓದಿ: ಗೊಡ್ಡು ಬೆದರಿಕೆಗೆ ಹೆದರಲ್ಲ, ನನ್ನ ಆಸ್ತಿ ಬಗ್ಗೆ ಕೇಳಲು ಅವರೇನು ಐಟಿ ಅಧಿಕಾರಿನಾ: ಹೆಚ್ಡಿಕೆಗೆ ಡಿಕೆಶಿ ತಿರುಗೇಟು

ಅಪ್ರಾಪ್ತರು ಈ ವೇದಿಕೆಗಳಲ್ಲಿ ನೋಂದಾಯಿಸುವುದನ್ನು ತಡೆಯುವುದನ್ನು ಮಧ್ಯವರ್ತಿಗಳಿಗೆ ಕಡ್ಡಾಯಗೊಳಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೊಸ ಶಾಸನಬದ್ಧ ಕ್ರಮಗಳ ಮೂಲಕ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಬಲಪಡಿಸಲಾಗುವುದು ಅಂತ ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ: ಪ್ರದೀಪ್ ಈಶ್ವರ್

