ನವದೆಹಲಿ: ತಮಿಳುನಾಡಿಗೆ ಏಪ್ರಿಲ್ ಮತ್ತು ಮೇ ತಿಂಗಳ ನೀರನ್ನು ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ.
ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಸ್ಕೀಂ ರೂಪಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಮಿಳುನಾಡಿಗೆ ಬಿಡಬೇಕಾಗಿದ್ದ 4 ಟಿಎಂಸಿ ನೀರನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿದೆ.
Advertisement
ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಸ್ಕೀಂ ಹೇಗಿರಬೇಕು ಎನ್ನುವ ಬಗ್ಗೆ ಕರಡು ಈಗಾಗಲೇ ತಯಾರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರು ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಸಕ್ರೀಯರಾಗಿದ್ದರಾರೆ. ಸ್ಕೀಂಗೆ ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿಲ್ಲ ಎಂದು ತಿಳಿಸಿದರು. ಈ ವೇಳೆ ಎಜೆ ವಾದವನ್ನು ಆಕ್ಷೇಪಿಸಿದ ಕೋರ್ಟ್ ಮುಂದಿನ 10 ದಿನದ ಒಳಗಡೆ ಕಾವೇರಿ ಸ್ಕೀಂ ಕರಡನ್ನು ಕೋರ್ಟ್ ಗೆ ಸಲ್ಲಿಸಬೇಕು ಎಂದು ಕೇಂದ್ರಕ್ಕೆ ಸೂಚಿಸಿತು.
Advertisement
Advertisement
ಇದೂವರೆಗೆ ತಮಿಳುನಾಡಿಗೆ ಹರಿಸಿದ ನೀರಿನ ಪ್ರಮಾಣ, ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣದ ಮಾಹಿತಿಯನ್ನು ಸಲ್ಲಿಸಿ ಎಂದು ಕೋರ್ಟ್ ಕರ್ನಾಟಕಕ್ಕೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮೆ 8 ಮಂಗಳವಾರಕ್ಕೆ ಮುಂದೂಡಿತು.
Advertisement
Cauvery river water dispute case: Attorney General, K K Venugopal, submitted to the Supreme Court that 'the Cauvery management board draft has to be tabled before the Union Cabinet and as Prime Minister is in Karnataka for elections, the draft therefore has not been approved yet' pic.twitter.com/ryUFoxrqXj
— ANI (@ANI) May 3, 2018
ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತ್ತು. ಈ ತೀರ್ಪಿನ ಅನ್ವಯ ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು ಎಂದು ಆದೇಶಿಸಿತ್ತು.
Cauvery river water dispute case: Supreme Court asked Karnataka Government to give 4 tmc of water to Tamil Nadu and also directed the Central Government to file an affidavit in the matter. Next date of hearing is May 8.
— ANI (@ANI) May 3, 2018
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಜನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
Chennai: Sasikala's Brother Dhivakaran appears before Justice Arumugasamy Commission that is inquiring into the death of the late Chief Minister J Jayalalithaa. #TamilNadu
— ANI (@ANI) May 3, 2018
Delhi: A Tamil Nadu farmer climbs up a tree in Supreme Court premises during a protest demanding formation of #CauveryManagementBoard pic.twitter.com/ZIkRm1CEAf
— ANI (@ANI) May 3, 2018