ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ಆರೋಪಿಗಳಾದ ದರ್ಶನ್ (Darshan) ಮತ್ತು ಗ್ಯಾಂಗ್ ಸದಸ್ಯರಿಗೆ 2 ತಿಂಗಳು ರಿಲೀಫ್ ಸಿಕ್ಕಿದೆ.
ದರ್ಶನ್ ಮತ್ತು ಇತರೇ ಆರೋಪಿಗಳಿಗೆ ಜಾಮೀನು (Bail) ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ವಿಚಾರಣೆ ಮುಗಿಸಿ ದರ್ಶನ್ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ
ಕಲಾಪ ಆರಂಭವಾಗುತ್ತಿದ್ದಂತೆ ಸರ್ಕಾರಿ ವಕೀಲರು ಮನ್ಷನ್ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್ ಬೇಸಿಗೆ ರಜೆ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತು.
ಜುಲೈ 14ಕ್ಕೆ ಸುಪ್ರೀಂ ಕೋರ್ಟ್‌ಗೆ ಬೇಸಿಗೆ ರಜೆ ಅಂತ್ಯವಾಗಲಿದೆ. ಹೀಗಾಗಿ ಅಲ್ಲಿಯವರೆಗೆ ದರ್ಶನ್ ಮತ್ತು ಇತರೇ ಆರೋಪಿಗಳಿಗೆ ರಿಲೀಫ್ ಸಿಕ್ಕಿದೆ. ಇದನ್ನೂ ಓದಿ: ‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್
2024ರ ಡಿ.13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.