-ಅನರ್ಹ ಶಾಸಕರಿಗೆ ಕಂಟಕನಾ?
ನವದೆಹಲಿ: ಸಿಎಂ ಯಡಿಯೂರಪ್ಪನವರ ಆಡಿಯೋವನ್ನು ಸುಪ್ರೀಂಕೋರ್ಟ್ ಸಾಕ್ಷ್ಯವಾಗಿ ಪರಿಗಣಿಸಿದೆ.
ಸೋಮವಾರ ಸುಪ್ರೀಂಕೋರ್ಟ್ ಕದ ತಟ್ಟಿದ್ದ ಕಾಂಗ್ರೆಸ್, ಸಿಎಂ ಯಡಿಯೂರಪ್ಪರ ಆಡಿಯೋವನ್ನು ಪರಿಗಣಿಗಣಿಸಿ ಮತ್ತೆ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತ್ತು. ಮನವಿ ಪುರಸ್ಕರಿಸಿದ್ದ ಸುಪ್ರೀಂಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಇಂದು ವಿಚಾರಣೆ ನಡೆಸಿದ ನ್ಯಾ.ಎನ್.ವಿ.ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನ್ಯಾಯಪೀಠ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಿದೆ.
Advertisement
Advertisement
ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರ ವಾದವನ್ನು ಜೆಡಿಎಸ್ ಪರ ವಕೀಲರಾದ ರಾಜೀವ್ ಧವನ್ ಬೆಂಬಲಿಸಿದರು. ಇದೇ ವೇಳೆ ಸಿಎಂ ಪರ ವಕೀಲರು ಆಡಿಯೋವನ್ನು ಉತ್ಪ್ರೇಕ್ಷೆ ಮಾಡಲಾಗುತ್ತಿದೆ. ಆಡಿಯೋ ಸತ್ಯ ತಿಳಿಯಬೇಕಿದೆ ಎಂದು ವಾದಿಸಿದರು. ಸಿಎಂ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಬೇಕು. ನೋಟಿಸ್ ನೀಡಿದ್ರೆ ತೀರ್ಪು ವಿಳಂಬವಾಗುತ್ತದೆ. ಹಾಗಾಗಿ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಲಾಗುತ್ತಿದೆ ಎಂದು ನ್ಯಾಯಾಧೀಶರು ತಿಳಿಸಿದರು.