ನವದೆಹಲಿ: ಚಿತ್ರದುರ್ಗದ ಮುರುಘಾ ಶ್ರೀ (Murugha Seer) ಮತ್ತೆ ಜೈಲುಪಾಲಾಗಿದ್ದಾರೆ. ನಾಲ್ಕು ತಿಂಗಳ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court), ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ.
ನಾಲ್ಕು ತಿಂಗಳಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಇನ್ನೆರಡು ತಿಂಗಳು ಹೆಚ್ಚುವರಿಗೆ ನ್ಯಾಯಾಂಗ ಬಂಧನ ನೀಡುವ ಸಾಧ್ಯತೆಗಳು ಕೂಡ ಇದೆ. ಇತ್ತ ವಿಶೇಷ ನ್ಯಾಯಾಲಯದಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ