ಚಿಕ್ಕಮಗಳೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರು ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು.
ಗುರುವಾರ ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ನ್ಯಾಯಮೂರ್ತಿಗಳು, ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮಧ್ಯಾಹ್ನ 3 ಗಂಟೆ ವೇಳೆಗೆ ಶೃಂಗೇರಿಗೆ ಆಗಮಿಸಿದರು.
Advertisement
Advertisement
ಶಾರದಾಂಬೆಯ ದರ್ಶನ ಪಡೆದ ನ್ಯಾಯಮೂರ್ತಿಗಳು, ಗುರುವಾರ ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಶುಕ್ರವಾರ ಬೆಳಗ್ಗೆ 8:30ಕ್ಕೆ ಮಂಗಳೂರಿಗೆ ಹೋಗಿ ಅಲ್ಲಿಂದ 12 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.
Advertisement
ನ್ಯಾಯಮೂರ್ತಿಗಳ ಜೊತೆ, ಬಾಂಬೆ ಹೈ ಕೋರ್ಟಿನ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈ ಕೋರ್ಟಿನ ರಿಜಿಸ್ಟ್ರಾರ್, ಚಿಕ್ಕಮಗಳೂರು ಹಾಗೂ ಶೃಂಗೇರಿ ನ್ಯಾಯಾಲಯದ ನ್ಯಾಯಮೂರ್ತಿಗಳು ಜೊತೆಗಿದ್ದರು. ನ್ಯಾಯಮೂರ್ತಿಗಳನ್ನು ಮಠದ ಆಡಳಿತಾಧಿಕಾರಿ ಗೌರಿಶಂಕರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಎಸ್ಪಿ ಹರೀಶ್ ಪಾಂಡೆ ಸ್ವಾಗತಿಸಿದರು.