ನವದೆಹಲಿ: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಭೂಮಿಯನ್ನು ಡಿ ನೋಟಿಫಿಕೇಷನ್ (De-Notification Case) ಮಾಡಿದ ಪ್ರಕರಣವನ್ನು ದೀಪಾವಳಿ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ (Uday Umesh Lalit) ತಿಳಿಸಿದ್ದಾರೆ.
ತಮ್ಮ ವಿರುದ್ಧ ತನಿಖೆಗೆ ಸೂಚಿಸಿದ್ದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ.ಯು.ಯು ಲಲಿತ್, ಈ ಹಿಂದೆ ಬಿ.ಎಸ್ ಯಡಿಯೂರಪ್ಪ (B.S.Yediyurappa) ಪರವಾಗಿ ವಾದ ಮಂಡಿಸಿದ್ದರು. ಈ ಹಿನ್ನೆಲೆ ಅವರ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಲು ನಿರಾಕರಿಸಿದರು. ಬೇರೊಂದು ಪೀಠದಲ್ಲಿ ದೀಪಾವಳಿ (Diwali) ಬಳಿಕ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಾಂಧಿ ಪರಿವಾರ ಪವರ್ ಸೆಂಟರ್ ಅಲ್ಲ, ಅಧ್ಯಕ್ಷನಾದ ಬಳಿಕವೂ ಸಲಹೆ ಪಡೆಯುತ್ತೇನೆ: ಖರ್ಗೆ
ದೇವನಹಳ್ಳಿಯಲ್ಲಿರುವ (Devanahalli) ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಭೂಮಿಯನ್ನು ಡಿ ನೋಟಿಫಿಕೇಷನ್ ಮಾಡಿರುವುದಾಗಿ ಆರೋಪಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಲಂಪಾಷ ಲೋಕಾಯುಕ್ತಕ್ಕೆ ದೂರು ನೀಡಿದರು. ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಗೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ಬಿಎಸ್‍ವೈ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಎಷ್ಟೇ ದೊಡ್ಡವರಾದರು ಕಾನೂನಿನ ಮುಂದೆ ಎಲ್ಲರೂ ಒಂದೇ : ಆರಗ ಜ್ಞಾನೇಂದ್ರ