* 17 ವರ್ಷಗಳಿಂದ ಬೇರಾಗಿದ್ದ ಒಮರ್ & ಪತ್ನಿ ಪಾಯಲ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಮತ್ತು ಅವರ ಪತ್ನಿ ಪಾಯಲ್ (Payal) ಅವರಿಗೆ ವಿಚ್ಛೇದನ ನೀಡುವುದಾಗಿ ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ತಿಳಿಸಿದೆ.
ದಂಪತಿ ತಮ್ಮ ಮದುವೆಯನ್ನು ವಿಸರ್ಜಿಸಲು ಮತ್ತು ಬಾಕಿ ಇರುವ ಎಲ್ಲಾ ವಿವಾದಗಳನ್ನು ಬಗೆಹರಿಸಲು ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಅದರ ಬೆನ್ನಲ್ಲೇ ವಿಚ್ಛೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ಇದನ್ನೂ ಓದಿ: ಬಿಜೆಪಿ ತೊರೆದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ

ದೆಹಲಿ ಹೈಕೋರ್ಟ್ ತನ್ನ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅಬ್ದುಲ್ಲಾ ಸಲ್ಲಿಸಿದ್ದ ಅರ್ಜಿಯಲ್ಲಿ ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಅವರು 2024 ರಲ್ಲಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.
ಇಬ್ಬರೂ ಸ್ವಾತಂತ್ರ್ಯವನ್ನು ಬಯಸಿದ್ದಾರೆ. ಪರಸ್ಪರ ಒಪ್ಪಿಕೊಂಡ ಇತ್ಯರ್ಥ ನಿಯಮಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ತಿಳಿಸಿದರು. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು, ‘ನಾವು ಒಪ್ಪಂದದ ಪ್ರಕಾರ ಆದೇಶವನ್ನು ರವಾನಿಸುತ್ತೇವೆ. ಅವರ ನಡುವಿನ ಎಲ್ಲಾ ಪ್ರಕರಣಗಳನ್ನು ಸಹ ಹಿಂಪಡೆಯಲಾಗುತ್ತದೆ’ ಎಂದು ತಿಳಿಸಿತು. ಇದನ್ನೂ ಓದಿ: 20 ವರ್ಷಗಳ ಬಳಿಕ ಬಂಗಾಳಕ್ಕೆ ಮರಳಿದ ಲೇಖಕಿ ತಸ್ಲೀಮಾ
ಜುಲೈ 22 ರಂದು ವಿಚ್ಛೇದನಕ್ಕೆ ಪರಸ್ಪರ ಒಪ್ಪಿದ ಷರತ್ತುಗಳನ್ನು ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದು, ಒಪ್ಪಂದದ ಪ್ರಕಾರ ಮದುವೆಯನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಸಿಬಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
