ನವದೆಹಲಿ: ಕರ್ನಾಟಕ ಹೈಕೋರ್ಟ್‌ನ (Karnataka High Court) ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ (Collegium) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಡಿಶಾ, ನ್ಯಾ. ಕೆ.ನಟರಾಜನ್ ಅವರನ್ನು ಕೇರಳ, ನ್ಯಾ. ಎನ್.ಎಸ್ ಸಂಜಯ್ ಗೌಡ ಅವರನ್ನು ಗುಜರಾತ್, ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಿಲು ಕೊಲಿಜಿಯಂ ಶಿಫಾರಸು ಮಾಡಿದೆ.
ಅಲ್ಲದೆ, ತೆಲಂಗಾಣ ನ್ಯಾಯಮೂರ್ತಿ ಪೆರುಗು ಶ್ರೀಸುಧಾ ಮತ್ತು ಆಂಧ್ರ ಪ್ರದೇಶದ ಡಾ. ಕುಂಭಜದಲ ಮನ್ಮಧ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆಯೂ ಶಿಫಾರಸು ಮಾಡಲಾಗಿದೆ.