– ಕೇಜ್ರಿವಾಲ್ ರೀತಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ
ನವದೆಹಲಿ: ಮಧ್ಯಂತರ ಜಾಮೀನು (Interim Bail) ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ (Hemant Soren) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.
Advertisement
ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಚುನಾವಣಾ ಪ್ರಚಾರಕ್ಕೆ ಹೇಗೆ ಮಧ್ಯಂತರ ಜಾಮೀನು ನೀಡಲಾಗಿದೆಯೋ ಅದೇ ರೀತಿಯಾಗಿ ನನಗೂ ಜಾಮೀನು (Bail) ನೀಡಬೇಕೆಂದು ಕೋರಿ ಹೇಮಂತ್ ಸೊರೇನ್ ಅರ್ಜಿ ಸಲ್ಲಿಸಿದ್ದರು.
Advertisement
Advertisement
ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ್ದ ನ್ಯಾ. ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠದ ಬಳಿ ತನ್ನ ಕಕ್ಷಿದಾರರಿಗೆ ಜಾಮೀನು ನೀಡಬೇಕು. ಅವರಿಗೂ ಚುನಾವಣಾ ಪ್ರಚಾರ ನಡೆಸಲು ಅನುಮತಿ ನೀಡಬೇಕು. ಹೀಗಾಗಿ ಮೇ 17 ರಂದು ತುರ್ತು ಅರ್ಜಿ ವಿಚಾರಣೆ ನಡೆಸಿ ಎಂದು ವಕೀಲ ಕಪಿಲ್ ಸಿಬಲ್ (Kapil Sibal) ಮನವಿ ಮಾಡಿದರು.
Advertisement
ಈ ವೇಳೆ ಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮೇ 20 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು. ಯಾಕೆಂದರೆ ಈ ಅರ್ಜಿಯ ವಿಚಾರಣೆಗೆ ಇಡಿ ಪ್ರತಿಕ್ರಿಯೆ ನೀಡಲು 7 ದಿನ ಸಮಯ ನೀಡಬೇಕು ಎಂದು ಪೀಠ ಹೇಳಿತು. ಇದಕ್ಕೆ ಸಿಬಲ್, ಚುನಾವಣೆ ಮೇ 20 ರಂದು ಮುಕ್ತಾಯವಾಗುತ್ತದೆ. ಇಲ್ಲಿಯವರೆಗೆ ನಾನು ಈ ರೀತಿಯ ಮನವಿ ಸಲ್ಲಿಸಿಲ್ಲ. ಒಂದು ವೇಳೆ ಮೇ 17 ರಂದು ಅರ್ಜಿ ವಿಚಾರಣೆ ನಡೆಸದೇ ಇದ್ದರೆ ನಮಗೆ ದೊಡ್ಡ ಅನ್ಯಾಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸಂತ್ರಸ್ತೆಯ ಅಪಹರಣ ಕೇಸ್- ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು
ಮೇ 20 ರಂದು ಚುನಾವಣೆ ನಡೆಯಲಿರುವ ಕಾರಣ 48 ಗಂಟೆಯ ಮೊದಲು ಬಹಿರಂಗ ಪ್ರಚಾರ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಿದರೆ ನಿಮ್ಮ ಕಕ್ಷಿದಾರರಿಗೆ ಹೇಗೆ ಲಾಭವಾಗುತ್ತದೆ ಎಂದು ಕೋರ್ಟ್ ಪ್ರಶ್ನೆ ಮಾಡಿತು.
ಈ ವೇಳೆ ಚುನಾವಣೆಯಲ್ಲಿ ಭಾಗವಹಿಸಲು ಈ ಅರ್ಜಿ ಸಲ್ಲಿಸಿದ್ದೇವೆ. ಮೇ 20ಕ್ಕೆ ಚುನಾವಣೆ ನಡೆಯಲಿದೆ. ಒಂದು ವೇಳೆ ಅನುಮತಿ ಸಿಗದೇ ಇದ್ದರೆ ಅರ್ಜಿಯನ್ನು ವಜಾಗೊಳಿಸಿ ಎಂದು ಮನವಿ ಮಾಡಿದರು.
ಈ ವೇಳೆ ಸೊರೆನ್ ಮೇಲೆ 8.8 ಎಕ್ರೆ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ಇಡಿ ಆರೋಪಿಸಿದೆ ಎಂದು ನ್ಯಾ. ಖನ್ನಾ ಹೇಳಿದ್ದಕ್ಕೆ, ಸಿಬಲ್ ಸೊರೆನ್ ವಶಪಡಿಸಿಕೊಂಡಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಇಡಿ ಆರೋಪಿಸಿದಂತೆ ಅಕ್ರಮ ಹಣ ವರ್ಗಾವಣೆ ಮಾಡಿಲ್ಲ ಎಂದು ವಾದಿಸಿದರು. ಅಂತಿಮವಾಗಿ ಕೋರ್ಟ್ ಪಿಎಂಎಲ್‌ಎ ಅಡಿಯಲ್ಲಿ ಸೊರೆನ್ ಬಂಧನ ಮಾಡಿದ್ದು ಸರಿ ಎಂಬುದರ ಬಗ್ಗೆ ಮೇ 17 ರಂದು ವಿಚಾರಣೆ ನಡೆಸುವುದಾಗಿ ಹೇಳಿತು. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್