ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಬಳಕೆಯಾದ ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕೆಯ ವೇಳೆ ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣೆ ಮತ ಎಣಿಕೆ ವೇಳೆ ವಿವಿಪ್ಯಾಟ್ ಗಳಲ್ಲಿ ಬಿದ್ದಿರುವ ವೋಟ್ ಮತ್ತು ಇವಿಎಂನಲ್ಲಿ ಬಿದ್ದಿರುವ ವೋಟ್ ಗಳನ್ನು ತಾಳೆ ಮಾಡಬೇಕು. ಕನಿಷ್ಟ 25% ಇವಿಎಂ ಗಳನ್ನಾದರೂ ಬಳಸಿ ಕ್ರಾಸ್ ಚೆಕ್ ಮಾಡಲು ಚುನಾವಣಾ ಆಯೋಗಕ್ಕೆ ಆದೇಶಿಸಬೇಕು ಎಂದು ಗುಜರಾತ್ ಕಾಂಗ್ರೆಸ್ ಅರ್ಜಿ ಸಲ್ಲಿಸಿತ್ತು.
Advertisement
ವಿಚಾರಣೆ ವೇಳೆ ಈ ಅರ್ಜಿ ಪರಿಶೀಲಿಸಲು ಯೋಗ್ಯವಲ್ಲ. ಇದರ ಬದಲಾಗಿ ಚುನಾವಣಾ ಸುಧಾರಣೆಗೆ ಸಂಬಂಧಿಸಿದಂತೆ ಒಂದು ರಿಟ್ ಅರ್ಜಿ ಸಲ್ಲಿಸಿ ಎಂದು ಸೂಚಿಸಿ ಈ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ. ಈ ಸಂದರ್ಭದಲ್ಲಿ ತನ್ನ ಪರಮಾಧಿಕಾರವನ್ನು ಬಳಸಿ ಚುನಾವಣಾ ಆಯೋಗದ ಕಾರ್ಯದಲ್ಲಿ ನಾನು ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
Advertisement
Advertisement
ಗುಜರಾತ್ ಕಾಂಗ್ರೆಸ್, ಇವಿಎಂ ಹ್ಯಾಕ್ ಮಾಡಲಾಗಿದೆ. ಅಷ್ಟೇ ಅಲ್ಲದೇ ಇವಿಎಂಗಳಿಗೆ ಬ್ಲೂ ಟೂತ್ ಸಾಧನಗಳನ್ನು ಅಳವಡಿಸಲಾಗಿದೆ. ಹೀಗಾಗಿ ಮತ ಎಣಿಕೆಯ ವೇಳೆ ಇವಿಎಂಗಳನ್ನು ಮರು ಪರಿಶೀಲಸಬೇಕು ಎಂದು ಮನವಿ ಮಾಡಿತ್ತು. (ಇದನ್ನೂ ಓದಿ: ರಾಜ್ಯದಲ್ಲೂ ಶುರುವಾಯ್ತು ಇವಿಎಂ ಗದ್ದಲ)
Advertisement
ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪ್ರತಿಕ್ರಿಯಿಸಿ, ಕಾಂಗ್ರೆಸ್ ಫಲಿತಾಂಶ ಬರುವುದಕ್ಕೆ ಮೊದಲೇ ಈ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಂಡಿದೆ ಎನ್ನುವುದು ಸ್ಪಷ್ಟವಾಗಿದೆ. ಆದರೂ ಈ ಸೋಲನ್ನು ತಪ್ಪಿಸಿ ಫಲಿತಾಂಶ ತಡೆ ಹಿಡಿಯಲು ಈ ತಂತ್ರವನ್ನು ಉಪಯೋಗಿಸಿದೆ ಎಂದು ಹೇಳಿದ್ದಾರೆ. (ಇದನ್ನೂ ಓದಿ: ಚುನಾವಣಾ ‘ಚಾಣಕ್ಯ’ರಾದ ಅಮಿತ್ ಶಾ, ಮೋದಿಗೇ ಗೆಲುವು ಅಂದಿದ್ದೇಕೆ ಟುಡೇಸ್ ಚಾಣಕ್ಯ?)
ಏನಿದು ವಿವಿಪಿಎಟಿ?
ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್(ಇವಿಪಿಎಟಿ) ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಈ ವ್ಯವಸ್ಥೆಯಲ್ಲಿ ವೋಟ್ ಹಾಕಿದ 7 ಸೆಕೆಂಡ್ ಬಳಿಕ ಮತದಾರರ ಕೈಗೆ ಒಂದು ಪೇಪರ್ ಬರುತ್ತೆ. ಇದರಲ್ಲಿ ವೋಟ್ ಯಾರಿಗೆ ಬಿದ್ದಿದೆ ಎನ್ನುವುದನ್ನು ನೋಡಿಕೊಳ್ಳಬಹುದು. ಆದರೆ ಈ ಪೇಪರ್ ಅನ್ನು ಬೂತ್‍ನಿಂದ ಹೊರಗಡೆ ತೆಗೆದುಕೊಂಡು ಹೋಗುವಂತಿಲ್ಲ. ನಾನು ಹಾಕಿರುವ ಅಭ್ಯರ್ಥಿಗೆ ಮತ ಬಿದ್ದಿದೆಯೋ ಇಲ್ಲವೋ ಎನ್ನುವುದನ್ನು ಖಚಿತ ಪಡಿಸಿ ಅಲ್ಲೇ ಇರುವ ಪೆಟ್ಟಿಗೆಯ ಒಳಗಡೆ ಚೀಟಿಯನ್ನು ಹಾಕಬೇಕಾಗುತ್ತದೆ. ಇವಿಎಂ ಬಗ್ಗೆ ಹಲವು ಮಂದಿ ಆಕ್ಷೇಪ ಎತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ವ್ಯವಸ್ಥೆಯನ್ನು ಅಳವಡಿಸುವಂತೆ ಚುನವಣಾ ಆಯೋಗಕ್ಕೆ 2016ರಲ್ಲಿ ಸಲಹೆ ನೀಡಿತ್ತು. (ಇದನ್ನೂ ಓದಿ: Exit Poll: ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ‘ಓಖಿ’)