ನವದೆಹಲಿ: India: The Modi Question ಸಾಕ್ಷ್ಯಚಿತ್ರ ಪ್ರಸಾರ ಮಾಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿಯನ್ನು (BBC) ಭಾರತದಲ್ಲಿ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾ ಮಾಡಿದೆ. ನಮಗೆ ಸೆನ್ಸಾರ್‌ಶಿಪ್ ವಿಧಿಸಲು ನೀವು ಹೇಳುತ್ತಿದ್ದಾರಾ? ನ್ಯಾಯಾಲಯವು ಸೆನ್ಸಾರ್‌ಶಿಪ್ ವಿಧಿಸಲು ಸಾಧ್ಯವಿಲ್ಲ ಎಂದ ಕೋರ್ಟ್ ಹೇಳಿದೆ.
ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ರೈತ ಮುಖಂಡ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿ ಅರ್ಜಿದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಇಂತಹ ಪಿಐಎಲ್‌ಗಳಿಂದ ಕೋರ್ಟ್ ಸಮಯ ಹಾಳು ಮಾಡಬೇಡಿ, ನ್ಯಾಯಾಲಯವು ಸೆನ್ಸಾರ್‌ಶಿಪ್ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿತು. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ
2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಹಿಂದೂ ಧರ್ಮದ ವಿರೋಧಿ ಪ್ರಚಾರವನ್ನು ಪ್ರತಿಬಿಂಬಿಸುತ್ತದೆ. ಭಾರತದ ಸ್ವಾತಂತ್ರ್ಯದ ಸಮಯದಿಂದಲೂ ಬಿಬಿಸಿ ಭಾರತೀಯ ವಿರೋಧಿ ನಿಲುವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷಗಳ ಕಾಲ ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸಿತು.
ಬಿಬಿಸಿ ನೆಟ್‌ವರ್ಕ್ ನಿಷೇಧಿಸುವಂತೆ ಜನವರಿ 27ರಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಂವಿಧಾನದ ಪರಿಚ್ಛೇದ 19(1)(ಎ) ಅಡಿಯಲ್ಲಿ ವಾಕ್ ಸ್ವಾತಂತ್ರ್ಯದ ಹಕ್ಕು ಸಂಪೂರ್ಣ ಹಕ್ಕಲ್ಲ. ಆದರೆ 19(2) ಪರಿಚ್ಛೇದದಿಂದ ಅರ್ಹವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದವನ್ನು ಕೋರ್ಟ್ ಪುರಸ್ಕರಿಸಲಿಲ್ಲ. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k