Connect with us

Bengaluru City

ಗಡಿಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದವರಿಗಿಂತ ರಸ್ತೆ ಅಪಘಾತದಲ್ಲಿ ಪ್ರಾಣ ಬಿಟ್ಟವರೆ ಹೆಚ್ಚು!

Published

on

– ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸಿದ ನಿವೃತ್ತ ನ್ಯಾಯಾಧೀಶ ಕೆ.ಎಸ್.ರಾಧಾಕೃಷ್ಣನ್ ಸಮಿತಿ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ರಸ್ತೆ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿ ದೇಶದದಲ್ಲಿ ಒಟ್ಟು 14,926 ಜನರು ಮೃತಪಟ್ಟಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಕೆ.ಎಸ್ ರಾಧಾಕೃಷ್ಣನ್ ನೇತೃತ್ವದ ಸಮಿತಿ ತಿಳಿಸಿದೆ.

ಈ ಕುರಿತು ಕೆ.ಎಸ್ ರಾಧಾಕೃಷ್ಣನ್ ನೇತೃತ್ವದ ಸಮಿತಿ ಇಂದು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ಸಾವಿನ ಸಂಖ್ಯೆ ನೋಡಿದ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದೆ. ಇದನ್ನು ಓದಿ: ರಸ್ತೆ ಗುಂಡಿ ತಪ್ಪಿಸಲು ಹೋದಾಗ ಆಟೋಗೆ KSRTC ಬಸ್ ಡಿಕ್ಕಿ- ದಂಪತಿ ದುರ್ಮರಣ

ಗಡಿಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗುವವರ ಸಂಖ್ಯೆಗಿಂತ ರಸ್ತೆ ಗುಂಡಿಗಳಿಂದಾಗಿ ಮೃತಪಟ್ಟವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ನ್ಯಾಯಾಧೀಶ ಮದನ್ ಬಿ ಲೋಕುರ್ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನು ಓದಿ: ಬೆಂಗ್ಳೂರಿನ ರಸ್ತೆಗಳಲ್ಲಿ ಓಡಾಡುತ್ತಿರುವವರೇ ಎಚ್ಚರ- ಅಪಘಾತಕ್ಕೆ ಬಾಯ್ತೆರೆದಿವೆ ರಸ್ತೆ ಗುಂಡಿಗಳು!

ರಸ್ತೆ ಗುಂಡಿಗಳಿಂದಾಗಿ 2013-2017ರ ಮಧ್ಯದಲ್ಲಿ ಭಾರೀ ಸಂಖ್ಯೆಯಲ್ಲಿ ಅಪಘಾತ ಸಂಭವಿಸಿವೆ. ಇದಕ್ಕೆಲ್ಲ ಸಂಬಂಧಿಸಿದ ಇಲಾಖೆಯ ಬೇಜವಾಬ್ದಾರಿಯೇ ಕಾರಣ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ದೀಪಕ್ ಗುಪ್ತಾ ಕಿಡಿಕಾರಿದ್ದಾರೆ. ರಸ್ತೆ ಸುರಕ್ಷತೆ ಕುರಿತು ಕ್ರಮ ಕೈಗೊಳ್ಳದೆ ಕೇಂದ್ರ ಸರ್ಕರದ ಬೇಜವಾಬ್ದಾರಿ ಮೆರೆದಿದೆ. ಈ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *