ಬೆಂಗಳೂರು: ಈ ವರ್ಷ ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದರು.
ಬೆಂಗಳೂರಿನ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಗಡುವನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ಸದ್ಯಕ್ಕಿಲ್ಲ GBA ಎಲೆಕ್ಷನ್; ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯಾವಕಾಶ ನೀಡಿದ ಸುಪ್ರೀಂ

ಎಸ್‌ಐಆರ್ ನಡೆಯುತ್ತಿರುವ ಹಿನ್ನೆಲೆ ಸಮಯ ಕೇಳಿದ್ದೆವು. ಸುಪ್ರೀಂ ಕೋರ್ಟ್ ಸಮಯ ಕೊಟ್ಟಿದ್ದು, ಆದೇಶವೇನಿದೆ ಅದರೊಳಗೆ ಚುನಾವಣೆ ನಡೆಸುತ್ತೇವೆ. ಎಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನ (local body Elections) ಆ ಟೈಂನೊಳಗೇ ನಡೆಸುತ್ತೇವೆ. ಡಿಸೆಂಬರ್ ಒಳಗೆ ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನ ನಡೆಸುತ್ತೇವೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್‌ನವರು ನನಗೆ ಏನು ಹೇಳಬೇಕು ಹೇಳಿದ್ದಾರೆ, ಶನಿವಾರ (ಜು.18) ಎಐಸಿಸಿ ಅಧ್ಯಕ್ಷರು ದೆಹಲಿಗೆ ಬರ್ತಾರೆ. ನಮ್ಮ ಅಭಿಪ್ರಾಯಗಳನ್ನ ಹೈಕಮಾಂಡ್‌ಗೆ ತಿಳಿಸಿದ್ದೇವೆ. ಹೈಕಮಾಂಡ್‌ನವರು ಏನು ನಿರ್ದೇಶನ ಕೊಡಬೇಕು ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ
