ನವದೆಹಲಿ: ಸುಪ್ರೀಂಕೋರ್ಟ್ (Supreme Court) ನ್ಯಾಯಾಧೀಶರಾಗಿ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ (Prashant Kumar Mishra) ಹಾಗೂ ಹಿರಿಯ ವಕೀಲ ಕೆವಿ ವಿಶ್ವನಾಥನ್ (KV Viswanathan) ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ (DY Chandrachud) ಅವರು ಇವರಿಬ್ಬರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಇದನ್ನೂ ಓದಿ: ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಜಾರಿ – ಕೊಟ್ಟ ಮಾತು ಉಳಿಸಿಕೊಳ್ತೀವಿ: ಡಿಕೆಶಿ
ನ್ಯಾ. ಮಿಶ್ರಾ ಅವರು ಆಂಧ್ರಪ್ರದೇಶದ ಹೈಕೋರ್ಟ್ (Andhra Pradesh High Court) ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ವಿಶ್ವನಾಥನ್ ಅವರು 2020ರ ಆಗಸ್ಟ್ 11 ರಂದು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರು ನಿವೃತ್ತರಾದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇವರು 2031ರ ಮೇ 25 ರವರೆಗೆ ಹುದ್ದೆಯಲ್ಲಿ ಇರಲಿದ್ದಾರೆ.
ಈ ಇಬ್ಬರ ಮೂಲಕ ಇದೀಗ ಸುಪ್ರೀಂಕೋರ್ಟ್ ನ್ಯಾಯಾಧೀಶರ ಬಲ 34ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಕೋರ್ಟ್ 32 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಇಬ್ಬರು ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಮಹೇಶ್ವರಿ ಮತ್ತು ಎಂ. ಆರ್ ಶಾ ಅವರು ಇತ್ತೀಚೆಗೆ ನಿವೃತ್ತರಾಗಿದ್ದಾರೆ.