ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi Liquor Policy Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿತು.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.
Advertisement
Advertisement
ಜಾಮೀನು ಮಂಜೂರು ವೇಳೆ ಕೇಜ್ರಿವಾಲ್‌ಗೆ, ಈ ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಬಾರದು. ಅಲ್ಲದೇ ವಿಚಾರಣೆಗೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಸುಪ್ರೀಂ ಷರತ್ತು ವಿಧಿಸಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಇಡಿ ಬಂಧಿಸಿದ್ದಾಗಲೂ ಸಹ ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು.