ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ನೀಡಿದೆ.
ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು. ಇದನ್ನೂ ಓದಿ:
Advertisement
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಚಾರಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಅವರು ಜೂನ್ 2 ರಂದು ಕೋರ್ಟ್ ಮುಂದೆ ಶರಣಾಗಿದ್ದರು.
Advertisement
Advertisement
ಜೂನ್ 20ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿತ್ತು. ಇಡಿ ಮರುದಿನ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಜೂನ್ 21ರಂದು ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಇದಾದ ಬಳಿಕ ಜೂನ್ 26ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
Advertisement
ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಿದ್ದರು.
ಏನಿದು ಅಬಕಾರಿ ನೀತಿ ಪ್ರಕರಣ?
2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಗಿತ್ತು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ನಂತರ ಇಡಿ ಪಿಎಂಎಲ್‍ಎ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.