ನವದೆಹಲಿ: 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (Board Exam) ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ (Karnataka High Court) ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೋರ್ಡ್ ಪರೀಕ್ಷೆ ನಡೆಸದಂತೆ ತಡೆ ನೀಡಿದೆ.
Advertisement
ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
Advertisement
Advertisement
ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.
Advertisement
ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಇದೀಗ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. 11ನೇ ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5,8 ಮತ್ತು 9ನೇ ತರಗತಿಗಳಿಗೆ ಮಾ.11 ರಿಂದ ಪರೀಕ್ಷೆಗಳು ಆರಂಭವಾಗಿತ್ತು.