ನವದೆಹಲಿ: ಸಂಸದರು (MP) ಮತ್ತು ಶಾಸಕರ (MLA) ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ (High Court) ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ (Supreme Court) ಸೂಚನೆ ನೀಡಿದೆ.
ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ಗ್ರಾಹಕರಿಗೆ ರಶೀದಿ ನೀಡದೆ 1.62 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ ಅರೆಸ್ಟ್
Advertisement
Advertisement
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು ಮುಖ್ಯವಾಗಿ ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳ ತ್ವರಿತ ವಿಲೇವಾರಿ ಮಾಡುವಂತೆ ಕೋರ್ಟ್ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಹೇಳಿದೆ.
Advertisement
Advertisement
ಉಪಾಧ್ಯಾಯ ಅವರು ಕಳೆದ ಏಪ್ರಿಲ್‍ನಲ್ಲಿ ಗಂಭೀರ ಅಪರಾಧಗಳಿಗಾಗಿ ಚಾರ್ಜ್‍ಶೀಟ್ ಮಾಡಿದ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು. ಇದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು. ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆರ್‌ಡಿ ಪಾಟೀಲ್ – ಪ್ರಚಾರಕ್ಕೆ ಬಂದಿದ್ರು ಅಖಿಲೇಶ್ ಯಾದವ್