ನವದೆಹಲಿ: ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ಮುಂದೂಡಲು ನಿರಾಕರಿಸಿದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5 ಕ್ಕೆ ಅಂತಿಮ ವೇಳೆ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.
Supreme Court begins hearing plea challenging Karnataka High Court's judgement upholding ban on Hijab in educational institutions.
The Apex Court says it will not accept a plea seeking adjournment as an early hearing was sought; Court issues notice to Karnataka Govt on the plea pic.twitter.com/S4dCbzCqRr
— ANI (@ANI) August 29, 2022
Advertisement
ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ನ್ಯಾ. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿ ವಿಚಾರಣೆ ಮುಂದೂಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಭಾರೀ ಮಳೆಗೆ ಹೆದ್ದಾರಿಯಲ್ಲಿ ನಿಂತ ನೀರು- ಸರಿಪಡಿಸಲು ಸೂಚನೆ: ಬೊಮ್ಮಾಯಿ
Advertisement
Advertisement
ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮಾಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರು ಈ ಹಿಂದೆ ಆರು ಬಾರಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಈಗ ವಿಚಾರಣೆ ವೇಳೆ ಮುಂದೂಡಿಕೆಗೆ ಮನವಿ ಮಾಡುತ್ತಿದ್ದಾರೆ. ಇದು ಸರಿಯಲ್ಲ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
Advertisement
Supreme Court issues notice on a plea seeking stay on Karnataka High Court upholding hijab ban. Next hearing is on Monday, 5th September. https://t.co/SxMDCby9Du
— ANI (@ANI) August 29, 2022
ಈ ವೇಳೆ ಅರ್ಜಿದಾರರ ವಿರುದ್ಧ ಗರಂ ಆದ ನ್ಯಾ. ಹೇಮಂತ್ ಗುಪ್ತಾ, ನಿಮ್ಮ ಅನುಕೂಲಕ್ಕೆ ತಕ್ಕಂತೆ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಇದು ಫೋರಂ ಶಾಪಿಂಗ್ ಅಲ್ಲ. ಹೀಗಾಗಿ ನೀವು ಕೇಳಿದ ಸಮಯದಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಸೆಪ್ಟೆಂಬರ್ 5 ರಂದು ವಿಚಾರಣೆ ನಡೆಸಲಾಗುವುದು. ಈ ಬಗ್ಗೆ ಉತ್ತರಿಸಬೇಕು ಎಂದು ಸೂಚಿಸಿ ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದರು.