ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಹೃದಯಾಘಾತ

Public TV
1 Min Read
AR SHAH

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಂಆರ್ ಶಾ ಅವರಿಗೆ ಗುರುವಾರ ಹಿಮಾಚಲ ಪ್ರದೇಶದಲ್ಲಿ ಹೃದಯಾಘಾತವಾಗಿದ್ದು, ಚಿಕಿತ್ಸೆಗೆ ಅವರನ್ನು ದೆಹಲಿಗೆ ಕರೆದೊಯ್ಯಲಾಗಿದೆ.

ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಎಂಆರ್ ಶಾ ಅವರ ಚಿಕಿತ್ಸೆಗೆ ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ

SUPREME COURT

ನ್ಯಾಯಮೂರ್ತಿ ಎಂಆರ್ ಶಾ ಪಾಟ್ನಾ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಗುಜರಾತ್ ಹೈಕೋರ್ಟ್ನ ಮಾಜಿ ನ್ಯಾಯಾಧೀಶರೂ ಆಗಿದ್ದಾರೆ. ಅವರು 2023ರ ಮೇ 15ರಂದು ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

Live Tv

Share This Article