ನವದೆಹಲಿ: ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ನಿವೃತ್ತ ಮಹಿಳಾ ನ್ಯಾಯಾಧೀಶರ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಚಿಂತನೆ ನಡೆಸಿದೆ.
ಪ್ರಕರಣದ ವಿಶೇಷ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ, ಈವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ
ವಾದ ಪ್ರತಿವಾದ ಆಲಿಸಿದ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ CJI ಚಂದ್ರಚೂಡ್, ನಮ್ಮ ಬಳಿ ಎರಡು ಆಯ್ಕೆಗಳಿವೆ. ಮೊದಲನೇಯದಾಗಿ ನಾವು ಓರ್ವ ಮಹಿಳಾ, ಓರ್ವ ಪುರುಷ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಬಹುದು, ವಾಸ್ತವಾಂಶ ತಿಳಿಯಲು ನಾವು ಸಮಿತಿ ರಚನೆ ಮಾಡಬೇಕಾಗುತ್ತದೆ. ಇನ್ನು 2ನೇ ಆಯ್ಕೆ ಸರ್ಕಾರ ಇಲ್ಲಿಯವರೆಗೂ ಏನು ಮಾಡಿದೆ? ಅನ್ನೋದರ ಮೇಲೆ ನಿರ್ಧಾರವಾಗುತ್ತೆ. ಈವರೆಗೂ ಸರ್ಕಾರ ತೆಗೆದುಕೊಂಡ ಕ್ರಮಗಳು ತೃಪ್ತಿಕರವಾಗಿದ್ದರೇ ನಾವು ಮಧ್ಯಪ್ರವೇಶ ಮಾಡದೇ ಇರುವುದು. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ
ಈ ಹಿನ್ನೆಲೆಯಲ್ಲಿ ನಮಗೆ ವಸ್ತುನಿಷ್ಠ ವರದಿಬೇಕು. ಈವರೆಗೂ 6,000 ಎಫ್‌ಐಆರ್ ವಿವರಗಳನ್ನ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಅನ್ನೋ ಮಾಹಿಯೂ ಬೇಕು. ದಾಖಲಾಗಿರುವ 6,000 FIRಗಳ ವಿಭಜನೆ ಮಾಡಬೇಕು. ಅದರಲ್ಲಿ ಎಷ್ಟು ಶೂನ್ಯ ಎಫ್‌ಐಆರ್ ದಾಖಲಾಗಿವೆ? ಎಷ್ಟು ಜನರ ಬಂಧನವಾಗಿದೆ? ಎಷ್ಟು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ? ಎಷ್ಟು ಮಂದಿ 156(3), ಎಷ್ಟು ಸೆಕ್ಷನ್ 164 ಹೇಳಿಕೆಗಳನ್ನ ದಾಖಲಿಸಲಾಗಿದೆ? ಎಂಬ ಮಾಹಿತಿ ಬೇಕು ಎಂದು ಸಿಜೆಐ ಚಂದ್ರಚೂಡ್ ನಿರ್ದೇಶಿಸಿದ್ದಾರೆ.
ಎಲ್ಲ ಮಾಹಿತಿಯನ್ನ ಆಗಸ್ಟ್ 1ರಂದು ಕೋರ್ಟ್‌ಗೆ ನೀಡಬೇಕು ಎಂದು ಅವರು ಇದೇ ವೇಳೆ ಸೂಚಿಸಿದರು. ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿವರಗಳನ್ನ ನೀಡಲು ಹೆಚ್ಚಿನ ಸಮಯವನ್ನ ಕೋರಿದರು. ಆದ್ರೆ ನ್ಯಾಯಾಲಯವು ನಿರಾಕರಿಸಿತು.
ಪ್ರಕರಣದ ಬಗ್ಗೆ ಎಸ್‌ಐಟಿ ರಚನೆ ಬಗ್ಗೆ ಕೇಂದ್ರ ಸರ್ಕಾರದ ಅಭಿಪ್ರಾಯವನ್ನ ಸುಪ್ರೀಂಕೋರ್ಟ್ ಕೇಳಿದೆ. ಎಸ್‌ಐಟಿ ರಚನೆ ಅಂತಿಮವಾದ್ರೆ ಯಾರನ್ನ ಸೇರ್ಪಡೆ ಮಾಡಬಹುದು? ಒಳ್ಳೆಯ ಹೆಸರುಗಳಿದ್ದರೆ ತಿಳಿಸಿ, ನಾವು ಆ ಹೆಸರುಗಳನ್ನು ಪರಿಶೀಲಿಸಬೇಕು ಎಂದು ಪೀಠ ಹೇಳಿ, ವಿಚಾರಣೆಯನ್ನ ನಾಳೆ ಮಧ್ಯಾಹ್ನಕ್ಕೆ ಮುಂದೂಡಿತು.
ಮಣಿಪುರು ಘಟನೆ ಸಮರ್ಥಿಸಲು ಸಾಧ್ಯವಿಲ್ಲ:
ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮಣಿಪುರ ಘಟನೆಗೆ ಸಮರ್ಥಿಸಲು ಸಾಧ್ಯವಿಲ್ಲ ಎಂದು ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ವಿಚಾರಣೆ ವೇಳೆ ವಕೀಲ ಬಾನ್ಸುರಿ ಸ್ವರಾಜ್ ಅವರ ವಾದಕ್ಕೆ ಪ್ರತಿಕ್ರಿಯಿಸಿದ ಅವರು, ಮಣಿಪುರ ಘಟನೆಯ ಜೊತೆಗೆ ಇತರೆ ಘಟನೆಗಳ ಹೋಲಿಕೆ ಮಾಡುವುದು ಸರಿಯಲ್ಲ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಗುಂಪುಗಳು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣಗಳು ತನಿಖೆಯಾಗಬೇಕು ಎಂದರು.
ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿಯೂ ಮಹಿಳೆಯರ ವಿರುದ್ಧದ ಅಪರಾಧಗಳು ನಡೆಯುತ್ತಿವೆ ಎಂಬುದನ್ನ ಒಪ್ಪಿಕೊಳ್ಳಲಾಗಿದೆ. ಆದ್ರೆ ಮಣಿಪುರದ ಪರಿಸ್ಥಿತಿ ವಿಭಿನ್ನವಾಗಿದೆ ಮತ್ತು ಅದನ್ನ ಇತರ ಘಟನೆಗಳಿಗೆ ಹೋಲಿಸುವ ಮೂಲಕ ಸಮರ್ಥಿಸಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]