ನವದೆಹಲಿ: ಆಮಿಷವೊಡ್ಡುವುದು, ಬೆದರಿಕೆಗಳ ಮೂಲಕ ಧಾರ್ಮಿಕ ಮತಾಂತರ (Religious Conversion) ಮಾಡುವುದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ (Central Government) ಸೂಚನೆ ನೀಡಿದೆ.
ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಕೃಷ್ಣ ಮುರಾರಿ ಅವರಿರುವ ದ್ವಿಸದಸ್ಯ ಪೀಠವು ಕೇಂದ್ರ, ಗೃಹ ಸಚಿವಾಲಯ ಮತ್ತು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ನವೆಂಬರ್ 14 ರೊಳಗೆ ಉತ್ತರಿಸುವಂತೆ ಸೂಚಿಸಿದೆ. ಇದನ್ನೂ ಓದಿ: ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ವಿಜಯೇಂದ್ರಗೆ ಸಂಕಷ್ಟ
Advertisement
Advertisement
ಬಲವಂತದ ಮತಾಂತರವನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
Advertisement
ಆಮಿಷ, ಬೆದರಿಕೆ, ವಂಚನೆ ಮೂಲಕ ಮತಾಂತರ ಮಾಡುವ ಘಟನೆಗಳು ದೇಶದಾದ್ಯಂತ ಪ್ರತಿ ವಾರ ವರದಿಯಾಗುತ್ತಿವೆ. ಆದರೆ ಕೇಂದ್ರ ಮತ್ತು ರಾಜ್ಯಗಳು ಇದನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿಲ್ಲ. ಇದು ರಾಷ್ಟ್ರಮಟ್ಟದ ಸಮಸ್ಯೆಯಾಗಿದ್ದು, ಇದನ್ನು ತಕ್ಷಣವೇ ನಿಭಾಯಿಸಬೇಕಾಗಿದೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ
Advertisement
ಬಲವಂತದ ಮತಾಂತರವನ್ನು ನಿಯಂತ್ರಿಸಲು ವರದಿ ಮತ್ತು ಮಸೂದೆಯನ್ನು ಸಿದ್ಧಪಡಿಸಲು ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.