ನವದೆಹಲಿ: ಪಟಾಕಿ (Firecracker) ನಿಷೇಧ ಕೇವಲ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ ಎಂದು ಸುಪ್ರೀಂ ಕೋರ್ಟ್ (Supreme Court) ದೆಹಲಿ (Delhi) ಸರ್ಕಾರ ಮತ್ತು ಪೊಲೀಸರಿಗೆ ಚಾಟಿ ಬೀಸಿದೆ.
ದೀಪಾವಳಿ ಹಬ್ಬದ (Deepavali Festival) ನಂತರ ಕೆಲವು ದಿನಗಳ ಕಾಲ ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಉಸಿರುಗಟ್ಟಿಸುವ ವಿಷಕಾರಿ ಗಾಳಿಯಿಂದ ತುಂಬಿದ್ದಕ್ಕೆ ಸುಪ್ರಿಂ ಕೋರ್ಟ್ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧ ಕ್ರಮವನ್ನು ಪ್ರತಿ ವರ್ಷ ಘೋಷಿಸುವ ಮತ್ತು ನಿರ್ಲಕ್ಷಿಸುವ ವಿಚಾರದ ಬಗ್ಗೆ ಸರ್ಕಾರ ಮತ್ತು ಪೊಲೀಸರು ತಕ್ಷಣ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ವಿವಾದ ಮತ್ತೆ ಮುನ್ನೆಲೆಗೆ – ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಮಹಿಳೆ ಅರೆಸ್ಟ್
ಪಟಾಕಿಗಳ ನಿಷೇಧವನ್ನು ದೆಹಲಿ ಎನ್‌ಸಿಆರ್‌ನಲ್ಲಿ ಜಾರಿಗೆ ತರಲಾಗಿಲ್ಲ ಎಂದು ವ್ಯಾಪಕ ವರದಿಗಳಿವೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಮುಖ ಕ್ರಮವಾಗಬೇಕಿತ್ತು ಎಂದು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ದ್ವಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.
ಪಟಾಕಿ ನಿಷೇಧ ಕುರಿತು ಸರ್ಕಾರದ ಆದೇಶವೇನು? ಅದನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತಿದೆ? ಎಂದು ನ್ಯಾಯಾಲಯ ಸರ್ಕಾರಕ್ಕೆ ಪ್ರಶ್ನಿಸಿದೆ. 2025 ರಲ್ಲಿ ದೆಹಲಿಯು ಮಾಲಿನ್ಯಕಾರಕಗಳಿಂದ ಉಸಿರುಗಟ್ಟುವ ವಾತಾವರಣ ಸೃಷ್ಠಿಯಾಗುವುದಿಲ್ಲ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಸರ್ಕಾರದ ಆದೇಶ ಏನಾದರೂ ಕೆಲಸ ಮಾಡಬೇಕು ಎಂದು ಪೀಠ ಸರ್ಕಾರದ ಕಿವಿ ಹಿಂಡಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಲ್ಯಾಂಡ್ ಜಿಹಾದ್ – ಬಿಜೆಪಿ ಆಕ್ರೋಶ
ಪಟಾಕಿ ನಿಷೇಧದ ಬಳಿಕವೂ ದೆಹಲಿಯಲ್ಲಿ ದೀಪಾವಳಿ ಸಮಯದಲ್ಲಿ ಭಾರೀ ಪಟಾಕಿ ಸಿಡಿಸಲಾಗಿದೆ. ಈಗಾಗಲೇ ವಿಶ್ವದ ಕಲುಷಿತ ನಗರಗಳ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಪಟಾಕಿ ನಿಷೇಧಿಸಿದ ಉದ್ದೇಶ ಈಡೇರಿದಿಯೇ? ಎಂದು ಸುಪ್ರೀಂಕೋರ್ಟ್ ದೆಹಲಿ ಸರ್ಕಾರಕ್ಕೆ ಪ್ರಶ್ನಿಸಿದೆ.
ದೆಹಲಿಯ ಮಾಲಿನ್ಯದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ಇದು ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚಾಗಿದೆ. ಅಲ್ಲದೇ ದೀಪಾವಳಿಯ ಆಸುಪಾಸಿನಲ್ಲಿ ಹುಲ್ಲು ಸುಡುವ ಪ್ರಕರಣಗಳು ಹೆಚ್ಚುತ್ತಿವೆ. ಅಕ್ಟೋಬರ್‌ನ ಕೊನೆಯ ಹತ್ತು ದಿನಗಳಲ್ಲಿ ಹುಲ್ಲು ಸುಟ್ಟ ಪ್ರಕರಣಗಳ ವಿವರಗಳ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಈ ವರ್ಷ ಪಟಾಕಿ ನಿಷೇಧವನ್ನು ಜಾರಿಗೆ ತರಲು ತೆಗೆದುಕೊಂಡ ಕ್ರಮಗಳು ಮತ್ತು ಮುಂದಿನ ವರ್ಷ ನಿಷೇಧವನ್ನು ಖಚಿತಪಡಿಸಿಕೊಳ್ಳಲು ಒಂದು ವಾರದೊಳಗೆ ಪ್ರಸ್ತಾಪಿಸಲಾದ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಸರ್ಕಾರ ಮತ್ತು ದೆಹಲಿ ಪೊಲೀಸ್ ಕಮಿಷನರ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಇದೇ ವೇಳೆ ಸಾರಿಗೆ ಮಾಲಿನ್ಯ, ಭಾರೀ ಟ್ರಕ್‌ಗಳ ಪ್ರವೇಶದಿಂದ ಉಂಟಾಗುವ ಮಾಲಿನ್ಯ ಮತ್ತು ಕೈಗಾರಿಕಾ ಮಾಲಿನ್ಯ ಸೇರಿದಂತೆ ಇತರ ಮಾಲಿನ್ಯಕಾರಕ ಪಾಲುದಾರರನ್ನು ಪರಿಗಣಿಸುವುದಾಗಿ ಕೋರ್ಟ್ ಹೇಳಿದೆ. ನ.14 ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.