– ಮೊನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ್ದ ಜೀವರಾಜ್‌ಗೆ ಶಾಕ್
ಚಿತ್ರದುರ್ಗ: ಶೃಂಗೇರಿ (Sringeri) ಅಂಚೆ ಮತ ಮರು ಎಣಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕರಾಗಿ ಬಿಜೆಪಿ ಜೀವರಾಜ್ (D.N.Jeevaraj) ಆಯ್ಕೆಯಾಗುವ ನಿಟ್ಟಿನಲ್ಲಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿದೆ. ಸುಪ್ರೀಂ ಆದೇಶದಿಂದ ರಾಜೇಗೌಡಗೆ (T.D.Rajegowda) ಬಿಗ್ ರಿಲೀಫ್ ಸಿಕ್ಕಿದೆ.
ಹೈಕೋರ್ಟ್‌ನ ಆದೇಶದಂತೆ ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಮುನ್ನಡೆ ಸಾಧಿಸಿ ಗೆದ್ದಿದ್ದರು. ಮೊನ್ನೆಯಷ್ಟೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮೋದಿ ಭಸ್ಮಾಸುರ, ಅವರ ಕುರ್ಚಿ ಗಟ್ಟಿ ಇದೆಯೇ ಎಂದು ನೋಡಿಕೊಳ್ಳಲಿ: ಬಿ.ಕೆ ಹರಿಪ್ರಸಾದ್ ವಾಗ್ದಾಳಿ
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶೃಂಗೇರಿ ಕ್ಷೇತ್ರದ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಮತ ಮರು ಎಣಿಕೆ ಸಂಬಂಧ ದಾಖಲೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸದ್ಯಕ್ಕೆ ರಾಜೇಗೌಡ ಅವರ ಶಾಸಕತ್ವ ಊರ್ಜಿತವಾಗಿದೆ. ಅವರು ಶಾಸಕರಾಗಿ ಮುಂದುವರಿಯಲಿದ್ದಾರೆ.
ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ 52 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. 2023ರ ಮತ ಎಣಿಕೆ ವೇಳೆ ಚಲಾವಣೆಯಾಗಿದ್ದ 1,822 ಅಂಚೆ ಮತಗಳ ಪೈಕಿ ಜೀವರಾಜ್ ಅವರಿಗೆ 692 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ 569 ಮತಗಳು ಲಭಿಸಿದ್ದವು. ಆದರೆ, ಮರು ಮತ ಎಣಿಕೆಯಲ್ಲಿ ಜೀವರಾಜ್ ಅವರ ಮತಗಳು 690 ಆದರೆ, ರಾಜೇಗೌಡರ ಮತಗಳು 314ಕ್ಕೆ ಇಳಿಯಿತು. ಹೀಗಾಗಿ, ರಾಜೇಗೌಡರಿಗೆ 255 ಮತಗಳು ಕಡಿಮೆಯಾಗಿದ್ದವು. ಎಣಿಕೆ ಪ್ರಕ್ರಿಯೆ ಮುಗಿದ ಬಳಿಕ ಈ ಬಗ್ಗೆ ಚುನಾವಣಾಧಿಕಾರಿ ಗೌರವಶೆಟ್ಟಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಜಯಾ ಪಕ್ಷದಲ್ಲಿ ಬಿರುಕು – ಎರಡು ಹೋಳಾಗುತ್ತಾ AIADMK?

